ಕೊಚ್ಚಿ : ಪ್ರಧಾನಿ ನರೇಂದ್ರ ಮೋದಿ ಆತ್ಮೀಯರು ಅನ್ನುವ ಕಾರಣಕ್ಕಾಗಿ ಕೇರಳ ಸಿಎಂ ಪಿಣರಾಯಿ ಹಾಗೂ ಎಡಪಂಥೀಯ ನಾಯಕರು ಉದ್ಯಮಿ ಅದಾನಿ ವಿರುದ್ಧ ತಿರುಗಿ ಬಿದ್ದಿದ್ದರು. ಅದಾನಿ ವಿರುದ್ಧ ಅವರ ಮಾಡದ ಟೀಕೆಗಳಿಲ್ಲ.
ಅದರಲ್ಲೂ ತಿರುವನಂತಪುರ ವಿಮಾನ ನಿಲ್ದಾಣವನ್ನು ಟೇಕ್ ಓವರ್ ಮಾಡುವ ಸಂದರ್ಭದಲ್ಲಿ ಕೇರಳ ಸರ್ಕಾರ ಈ ಪ್ರಕ್ರಿಯೆಯನ್ನು ಕಟುವಾಗಿ ಟೀಕಿಸಿತ್ತು.
ಆದರೆ ಇದೀಗ ಅದೇ ಆದಾನಿ ಕಂಪನಿಯಿಂದ ವಿದ್ಯುತ್ ಖರೀದಿಸಲು ಕೇರಳ ಸರ್ಕಾರ ಮುಂದಾಗಿದೆ.
ಕೇರಳ ರಾಜ್ಯ ವಿದ್ಯುಚ್ಛಕ್ತಿ ಮಂಡಳಿ 75 ಮೆಗಾವ್ಯಾಟ್ ವಿದ್ಯುತ್ ಖರೀದಿಸಲು ನಿರ್ಧರಿಸಿದ್ದು ಇದಕ್ಕಾಗಿ ಕೇರಳ ಸರ್ಕಾರ ಕೋಟಿ ಕೋಟಿ ಹಣವನ್ನು ಪಾವತಿಸಬೇಕಾಗಿದೆ.
Discussion about this post