ಕೆಲ ದಿನಗಳ ಹಿಂದೆ ಚಿತ್ರರಂಗದಲ್ಲಿ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ನಿರ್ಮಾಪಕ ವಿಜಯ್ ಕಿರಗಂದೂರು ಚಲನಚಿತ್ರ ಕಾರ್ಮಿಕರ ಒಕ್ಕೂಟಕ್ಕೆ 32 ಲಕ್ಷ ಹಣ ನೀಡಿದ್ದರು. ಜೊತೆಗೆ ತಮ್ಮ ‘ಹೊಂಬಾಳೆ’ ಸಂಸ್ಥೆಯಲ್ಲಿ ಕೆಲಸ ಮಾಡುವ 600ಕ್ಕೂ ಅಧಿಕ ಕಾರ್ಮಿಕರು ಮತ್ತು ಹಾಗೂ ಅವರ ಕುಟುಂಬ ಸದಸ್ಯರಿಗೆ ಉಚಿತವಾಗಿ ಕೊರೊನಾ ಲಸಿಕೆ ಹಾಕಿಸಿದ್ದರು.
ಇದೀಗ ಇದರ ಬೆನ್ನಲ್ಲೇ ಮಂಡ್ಯಕ್ಕೆ 2.35 ಕೋಟಿ ರೂ. ನೆರವು ನೀಡಿದ್ದಾರೆ. ಇದೇ ಹಣದಲ್ಲಿ ಇದೀಗ ಮಂಡ್ಯದ ವಿಮ್ಸ್ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸೌಲಭ್ಯಗಳ ತೀವ್ರ ನಿಗಾ ಘಟಕ (ಐಸಿಯು) ಆರಂಭಿಸಲಾಗಿದೆ.
ರೋಗಿಯ ರಕ್ತದೊತ್ತಡ, ಮಧುಮೇಹ, ಆಮ್ಲಜನಕ ಹೀಗೆ ಹಲವು ಮಾಹಿತಿ ಒಂದೇ ಮಾನಿಟರ್ನಲ್ಲಿ ಸಿಗುವ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಐಸಿಯು ಇದಾಗಿದ್ದು ಇದಕ್ಕೆ ಅಂದಾಜು 55 ಲಕ್ಷ ರೂ ವೆಚ್ಚ ಮಾಡಲಾಗಿದೆ.
ಐಸಿಯು ಮಾತ್ರವಲ್ಲದೆ ಜಿಲ್ಲೆಯಲ್ಲಿ 2 ಆಮ್ಲಜನಕ ಉತ್ಪಾದನಾ ಘಟಕವನ್ನು ಸ್ಥಾಪಿಸಲಾಗಿದೆ. 90 ಲಕ್ಷ ರೂ. ವೆಚ್ಚದಲ್ಲಿ ಕೆ.ಆರ್. ಪೇಟೆ, ಪಾಂಡವಪುರ ತಾಲೂಕು ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಿಸಲಾಗಿದೆ.
Discussion about this post