ಸರ್ಕಾರಿ ಶಾಲಾ ಮಕ್ಕಳಿಗೆ ಶೂ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಿಚ್ಚ ಸುದೀಪ್ ಅವರು ಮಕ್ಕಳಿಗೆ ಸ್ಕೂಲ್ ಶೂ ತೊಡಿಸಿ ತಮ್ಮಲ್ಲಿರುವ ಸಾಮಾಜಿಕ ಕಳಕಳಿಯನ್ನು ತೋರಿದ್ದಾರೆ.
ಇಂದು ಕೆಂಗೇರಿಯ ಸರ್ಕಾರಿ ಶಾಲಾ ಮಕ್ಕಳಿಗೆ ಕಿಚ್ಚಸುದೀಪ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮಕ್ಕಳಿಗೆ ಶೂ ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಶೂ ವಿತರಣೆ ಕಾರ್ಯಕ್ರಮಕ್ಕೆ ಸುದೀಪ್ ಅಭಿಮಾನಿಗಳು ಸುದೀಪ್ ಅವರನ್ನು ಆಹ್ವಾನ ಮಾಡಿದ್ದರು.

ಕಾರ್ಯಕ್ರಮಕ್ಕೆ ಆಗಮಿಸಿದ ಕಿಚ್ಚ ಸುದೀಪ್ ಅವರು, ಪ್ರತಿ ವಿದ್ಯಾರ್ಥಿಗೂ ತಾವೇ ಶೂ ವಿತರಿಸಿದರು. ಅಲ್ಲದೆ ವಿದ್ಯಾರ್ಥಿಯೊಬ್ಬನಿಗೆ ಸ್ವತಃ ತಾವೇ ಶೂ ತೊಡಿಸಿದ್ದು ವಿಶೇಷವಾಗಿತ್ತು. ಈ ವಿಶೇಷ ಕಾರ್ಯಕ್ರಮದ ಮೂಲಕ ಸರ್ಕಾರಿ ಶಾಲೆಗಳ ಪರ ನಾವಿದ್ದೇವೆ ಎಂಬ ಧನಾತ್ಮಕ ಸಂದೇಶವನ್ನು ಸುದೀಪ್ ರವಾನಿಸಿದರು.
ಸರ್ಕಾರಿ ಶಾಲಾ ಮಕ್ಕಳಿಗೆ ನೆರವಾದ ಸುದೀಪ್ ಅವರ ಈ ಕಾರ್ಯಕ್ಕೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದ್ದು, ಕಾರ್ಯಕ್ರಮದ ವಿಡಿಯೋ ವೈರಲ್ ಆಗಿದೆ.
Discussion about this post