ಕಾರ್ಯನಿರ್ವಹಿಸದ ಅಧಿಕಾರಿಗಳನ್ನು ಅಮಾನತುಗೊಳಿಸುವ ಎಚ್ಚರಿಕೆ
ರಾಜಧಾನಿ ಬೆಂಗಳೂರಿನಲ್ಲಿ 15 ದಿನದೊಳಗೆ ಗುಂಡಿ ಮುಚ್ಚುವಂತೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ ಕೆ ಶಿವಕುಮಾರ್ ಸೂಚಿಸಿದ್ದಾರೆ.
ವಿದೇಶ ಪ್ರವಾಸಕ್ಕೂ ಮುನ್ನ ವೈಯಾಲಿಕಾವಲ್ ಬಿಬಿಎಂಪಿ ಕಚೇರಿಯಲ್ಲಿ ಅಧಿಕಾರಿಗಳ ಜತೆ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಇಂದು ಸಭೆ ನಡೆಸಿದ ಅವರು ಸರಿಯಾಗಿ ಕಾರ್ಯನಿರ್ವಹಿಸದ ಅಧಿಕಾರಿಗಳನ್ನು ಅಮಾನತುಗೊಳಿಸುವ ಎಚ್ಚರಿಕೆ ನೀಡಿದ್ದಾರೆ.
ಸೆಪ್ಟಂಬರ್ ನಲ್ಲಿ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ಎಚ್ಚೆತ್ತುಕೊಳ್ಳುವಂತೆ ಸೂಚಿಸಿದ್ದಾರೆ. ಅಪಾಯಕಾರಿ ಮರಗಳನ್ನು ಕತ್ತರಿಸುವಂತೆ ಆದೇಶಿಸಿದ್ದಾರೆ. ಮರಗಳನ್ನು ಕತ್ತರಿಸಿ ಅಂದ ತಕ್ಷಣ ಕತ್ತರಿಸೋದಲ್ಲ, ಬದಲಾಗಿ ಅವುಗಳ ರೆಂಬೆ ಕೊಂಬೆಗಳನ್ನು ಟ್ರೀಮ್ ಮಾಡಿ ಅಪಾಯವೊಡ್ಡದಂತೆ ಎಚ್ಚರಿಕೆ ವಹಿಸಿ ಎಂದು ಸೂಚಿಸಿದ್ದಾರೆ.