20.2 C
Bengaluru
Saturday, January 16, 2021

ಕುಮಾರಸ್ವಾಮಿ ಒಬ್ಬ ರೈತನ ಮಗ – ಮಾಜಿ ಸಿಎಂ ಮೇಲೆ ಪ್ರತಾಪ್ ಸಿಂಹಗೆ ಉಕ್ಕಿ ಹರಿದ ಪ್ರೀತಿ

Must read

ಭೂಸುಧಾರಣಾ ಮಸೂದೆಗೆ ಜೆಡಿಎಸ್ ನೀಡಿರುವ ಬೆಂಬಲ ವ್ಯಾಪಕ ಟೀಕೆಗೆ ಕಾರಣವಾಗಿದೆ. ಕುಮಾರಸ್ವಾಮಿಯವರ ನಡೆ ಹಲವರ ಅಸಮಾಧಾನಕ್ಕೆ ಕಾರಣವಾಗಿದೆ. ಅದರಲ್ಲೂ ಬಿಜೆಪಿ ವಿರೋಧಿಗಳಂತು ಕುಮಾರಸ್ವಾಮಿಯವರ ಮೇಲೆ ಕೆಟ್ಟ ಕೆಟ್ಟ ಭಾಷಾ ಪ್ರಯೋಗ ನಡೆಸುತ್ತಿದ್ದಾರೆ.

ವಿರೋಧ ಪಕ್ಷ ಅಂದ್ರೆ ಎಲ್ಲವನ್ನೂ ವಿರೋಧಿಸುವುದಲ್ಲ, ಭೂ ಸುಧಾರಣ ಮಸೂದೆ ರೈತರಿಗೆ ಅನುಕೂಲವಾಗಿದೆ ಎಂದು ಕುಮಾರಸ್ವಾಮಿ ವಿವರಿಸಿದರೂ ಅದನ್ನು ಕೇಳುವ ಸ್ಥಿತಿಯಲ್ಲಿ ರೈತ ಸಂಘಟನೆಗಳ ಮುಖಂಡರಿಲ್ಲ.

ಇದೀಗ ಕುಮಾರಸ್ವಾಮಿ ವಿರುದ್ಧ ಟೀಕೆಗಳ ಸುರಿಮಳೆ ಜೋರಾಗುತ್ತಿದ್ದಂತೆ ಬಿಜೆಪಿ ನಾಯಕರು ಮಾಜಿ ಸಿಎಂ ರಕ್ಷಣೆಗೆ ಧಾವಿಸಿದ್ದಾರೆ.

ಈ ನಡುವೆ ಮೈಸೂರಿನಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಕುಮಾರಸ್ವಾಮಿ ಒಬ್ಬ ರೈತನ ಮಗ. ಅವರ ಬಗ್ಗೆ ಈ ರೀತಿ ಮಾತನಾಡುವುದು ಸರಿಯಲ್ಲ

ಕುಮಾರಸ್ವಾಮಿ 20-20 ಸರ್ಕಾರದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ರೈತರ ಸಾಲ ಮನ್ನಾದಂತಹ ರೈತಪರ ಕಾರ್ಯಕ್ರಮ ನೀಡಿದ್ದಾರೆ ಎಂದು ಕುಮಾರಸ್ವಾಮಿಯವರನ್ನು ಹಾಡಿ ಹೊಗಳಿದ್ದಾರೆ.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article