Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Kumaraswamy : ಹುಟ್ಟಿದ ಕೂಡಲೇ ಪಂಚೆ ಕಟ್ಟಿ ಸ್ವಾತಂತ್ಯ ಸಂಗ್ರಾಮಕ್ಕೆ ಧುಮುಕಿದ್ರ : ಸಿದ್ದು ಲೇವಡಿ ಮಾಡಿದ HDK

Radhakrishna Anegundi by Radhakrishna Anegundi
August 8, 2022
in ರಾಜ್ಯ
kumaraswamy-tweet-on-congress-leader-siddaramaiah
Share on FacebookShare on TwitterWhatsAppTelegram

ಬಿಜೆಪಿ ನಾಯಕರು ಕುಮಾರಸ್ವಾಮಿಯ ( Kumaraswamy) ವಾಗ್ದಾಳಿಯನ್ನು ಕಲಿತುಕೊಳ್ಳಬೇಕು. ಈ ಬಾರಿ ಸಿದ್ದರಾಮಯ್ಯ ವರದಿ ಭರ್ಜರಿ ಬರೆದಿದ್ದಾರೆ ಕುಮಾರಸ್ವಾಮಿ

ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ನಡುವಿನ ವಾಕ್ಸಮರ ನಿಲ್ಲುವ ಲಕ್ಷಣಗಳಿಲ್ಲ. ಇದೀಗ ಫೇಸ್ ಬುಕ್ ನಲ್ಲಿ ಸುದೀರ್ಘವಾದ ಬರಹ ಬರೆದಿರುವ ಕುಮಾರಸ್ವಾಮಿ,( ( Kumaraswamy) ) ಸಿದ್ದರಾಮಯ್ಯ ಅವರನ್ನೇ ಗಾಬರಿಗೊಳಿಸಿದ್ದಾರೆ. ಅವರ ಪೂರ್ತಿ ಬರಹ ಇಲ್ಲಿದೆ.

“ ಸ್ವಯಂಘೋಷಿತ ಸಂವಿಧಾನ ರಕ್ಷಕ ಸಿದ್ದರಾಮಯ್ಯ ಮತ್ತೆ Janata Dal Secular  ಬಗ್ಗೆ ವಿಷ ಕಾರಿಕೊಂಡಿದ್ದಾರೆ. ಜೆಡಿಎಸ್ ಪಕ್ಷ ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆ ಏನು ಎಂದು ಅವರು ಪ್ರಶ್ನಿಸಿದ್ದಾರೆ.

ನಮ್ಮ ಪಕ್ಷದ್ದು ಇರಲಿ, ಸ್ವಾತಂತ್ರ್ಯ ಹೋರಾಟಕ್ಕೆ ಈ ಸೋಗಲಾಡಿ ಸಿದ್ದಸೂತ್ರದಾರನ ಕೊಡುಗೆ ಏನು?

ವಿಕಿಪೀಡಿಯಾ ಪ್ರಕಾರ ನಿಮ್ಮ ಜನ್ಮವರ್ಷ 1947. ಹುಟ್ಟಿದ ಕೂಡಲೇ ಪಂಚೆ ಕಟ್ಟಿ ಸ್ವಾತಂತ್ಯ ಸಂಗ್ರಾಮಕ್ಕೆ ಧುಮುಕಿದರಾ ಮಿಸ್ಟರ್ ಸಿದ್ದರಾಮಯ್ಯ?

ಜೆಡಿಎಸ್ ಸ್ಥಾಪನೆ ಆಗಿದ್ದೇ 1999ರಲ್ಲಿ. ಆಗ ನೀವು ಎಲ್ಲಿದ್ದೀರಿ? ನಿಮಗೂ ಕಾಂಗ್ರೆಸ್ ಪಕ್ಷಕ್ಕೂ ಏನು ಸಂಬಂಧ? ನೀವು ಕಾಂಗ್ರೆಸ್ ಸೇರಿದ್ದು 2006ರಲ್ಲಿ. ಹೀಗಾಗಿ ಆ ಪಕ್ಷದ ಪೂರ್ವಾಪರದ ಬಗ್ಗೆ ಮಾತನಾಡಲು ಏನು ನೈತಿಕತೆ ಇದೆ ನಿಮಗೆ?

ಗೆದ್ದಲು ಕಟ್ಟಿಕೊಂಡ ಹುತ್ತಕ್ಕೆ ಹಾವಿನಂತೆ ಸೇರಿಕೊಂಡ ನೀವು, ಸ್ವಾರ್ಥ ಬೀಜಾಸುರನಾಗಿ ಆ ಪಕ್ಷದ ಮೂಲ ನಾಯಕರನ್ನೆಲ್ಲ ನುಂಗುತ್ತಿರುವ ನಿಮ್ಮ ಭಕಾಸುರ ಬಾಯಲ್ಲಿ ಸ್ವಾತಂತ್ರ್ಯ ಹೋರಾಟದ ಪಾರಾಯಣವೇ? ನಿಮಗೆ ಅದು ಬೇರೆ ಕೇಡು.

ಇದನ್ನು ಓದಿ : Savitha kundar : ಬಿಟ್ಹೋಗ್ಬೇಡಿ…. ಸರ್ಕಾರಿ ವೈದ್ಯೆ ವರ್ಗಾವಣೆಗೆ ಕಣ್ಣೀರಿಟ್ಟ ಗ್ರಾಮಸ್ಥರು

ಅಧಿಕಾರಕ್ಕಾಗಿ ದೀನ ದಲಿತರು, ಅಲ್ಪಸಂಖ್ಯಾತರ ಹೆಸರು ಬಳಸಿಕೊಂಡು, ಹಾದಿಬೀದಿಯಲ್ಲಿ ಹೈಡ್ರಾಮಾ ಆಡಿ ಕಾಂಗ್ರೆಸ್ ಪಕ್ಷಕ್ಕೆ ವಕ್ಕರಿಸಿಕೊಂಡ ನಿಮಗೆ, ಸ್ವಾತಂತ್ರ್ಯ ಹೋರಾಟದ ಬಗ್ಗೆ ಮಾತನಾಡುವ ನೈತಿಕ ಹಕ್ಕಿದೆಯಾ? ಖಂಡಿತಾ ಇಲ್ಲ.

ನೀವು ಹೇಳಿದ ಕಾಂಗ್ರೆಸ್ ಈಗೆಲ್ಲಿದೆ? ನೀವು ಕದ್ದಮಾಲು ಹ್ಯೂಬ್ಲೆಟ್ ವಾಚು ಕಟ್ಟಿದಾಗಲೇ 1947ರ ಕಾಂಗ್ರೆಸ್ ಗೆ ಸಮಾಧಿ ಕಟ್ಟಿದಿರಿ. 5 ವರ್ಷಗಳ ನಿಮ್ಮ ಆಡಳಿತದಲ್ಲಿ ಆ ನತದೃಷ್ಟ ಕಾಂಗ್ರೆಸ್ ಪಕ್ಷಕ್ಕೆ ಎಷ್ಟು ಸಾವಿನ ಮೊಳೆ ಹೊಡೆದಿರಿ, ಲೆಕ್ಕ ಹೇಳಬೇಕೆ ಮಿಸ್ಟರ್ ಸಿದ್ದರಾಮಯ್ಯ?

basavaraj-bommai-siddaramaiah-twitter-war-over-karnataka

ಮಹಾತ್ಮ ಗಾಂಧಿ ಅವರ ಕಾಂಗ್ರೆಸ್ ಪಕ್ಷವನ್ನು ನೀವೆಲ್ಲಾ ಸೇರಿ ಎಂದೋ ಮುಗಿಸಿದಿರಿ. ಅದಕ್ಕೆ ಸಮಾಧಿಯೂ ಕಟ್ಟಿ ತಿಥಿ ಊಟವನ್ನೂ ಮಾಡಿದ್ದೀರಿ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸ್ವಾತಂತ್ರ್ಯ ಉದ್ಯಾನವನದಲ್ಲಿ ಹೇಳಿದ ತಲೆ ತಲೆಮಾರುಗಳ ಲೂಟಿ ಕಾಂಗ್ರೆಸ್ ಮಾತ್ರವಷ್ಟೇ ಈಗ ಉಳಿದಿರುವುದು.

ಗಾಂಧಿ ಹೆಸರೇಳಿಕೊಂಡು ಮತ್ತೆ ಅಧಿಕಾರಕ್ಕೆ ಬರಲು ಹೊಂಚು ಹಾಕುತ್ತಿದ್ದೀರಿ. ಇನ್ನೆಷ್ಟು ತಲೆಮಾರಿಗೆ ಆಗುವಷ್ಟು ಲೂಟಿ ಹೊಡೆಯಬೇಕು ಮಿಸ್ಟರ್ ಸಿದ್ದರಾಮಯ್ಯ?

ಅಧಿಕಾರಕ್ಕಾಗಿ ಸ್ವಾತಂತ್ರ್ಯ ಹೋರಾಟದ ಜಪವೇ? ನೇರವಾಗಿ ಕುರ್ಚಿ ಜಪವನ್ನೇ ಮಾಡಬಹುದಲ್ಲವೇ?

ಅಂದು ದೇಶ ಉಳಿಸಿದ ಕಾಂಗ್ರೆಸ್ ಬೇರೆ, ಈಗ ದೇಶವನ್ನು ಲೂಟಿ ಹೊಡೆಯುತ್ತಿರುವ ಕಾಂಗ್ರೆಸ್ಸೇ ಬೇರೆ. ಲೂಟಿ ಹೊಡೆಯೋದೇ ದೇಶಪ್ರೇಮವಾ ಮಿಸ್ಟರ್ ಸಿದ್ದರಾಮಯ್ಯ? ನಿಮ್ಮ 5 ವರ್ಷದ ಆಡಳಿತದಲ್ಲಿ ನಿಮ್ಮ ಸುತ್ತಮುತ್ತಲಿನ ಪಟಾಲಂ ಹೊಡೆದ ಕೊಳ್ಳೆಯ ಲೆಕ್ಕ ಕೊಡಲೇ? ಅರ್ಕಾವತಿ ರೀಡು ಹಗರಣ ತೆಗೆದರೆ ಮುಖ ಎಲ್ಲಿಟ್ಟುಕೊಳ್ಳುತ್ತೀರಿ?

ಜೆಡಿಎಸ್ ಇನ್ನೊಂದು ಪಕ್ಷದ ಬಳಿ ಬೆಂಕಿ ಕಾಯಿಸಿಕೊಳ್ಳುವ ಪಕ್ಷ ಎನ್ನುತ್ತೀರಿ. ಆದರೆ, ನಿಮ್ಮನ್ನು ನಂಬಿದ್ದಕ್ಕೆ ನಮ್ಮ ಪಕ್ಷಕ್ಕೆ ನೀವೇ ಬೆಂಕಿ ಹಾಕಿದ್ದು ಮರೆತಿರಾ? ಬಿಜೆಪಿ ಜತೆ ಒಳಒಪ್ಪಂದ ಮಾಡಿಕೊಂಡು ಆಪ್ತರನ್ನೆಲ್ಲ ಮುಂಬಯಿಗೆ ಸಾಗಹಾಕಿದ ಕತ್ತಲ ಕಿತಾಪತಿ ಮಾಡಿದ್ದು ಯಾರು?

Kumaraswamy tears Father HD Devegowda Health

ಇಷ್ಟಕ್ಕೂ ತಾವೇನೂ ಮೂಲ ಕಾಂಗ್ರೆಸ್ಸಿಗರಲ್ಲ. ವಲಸೆ ಹೋಗಿ, ವಿಷಹುಳವಾಗಿ ಅಲ್ಲಿಗೆ ಕರೆದುಕೊಂಡು ಹೋದವರ ಕೈ ಕಚ್ಚಿದ್ದು, ಆಮೇಲೆ ನಿಮ್ಮಿಂದ ಆ ಪಕ್ಷ ಬಿಟ್ಟುಹೋದವರ ಪಟ್ಟಿ ಹನುಮನ ಬಾಲದಂತೆ ಬೆಳೆದದ್ದು ಗೊತ್ತಿಲ್ಲವೆ? ಆಶ್ರಯ ಕೊಟ್ಟ ಮನೆಯಲ್ಲೇ ಗಳ ಇರಿದವರು ಯಾರು?

ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ನೀವು ನಡೆಸುತ್ತಿರುವ ಷಡ್ಯಂತ್ರ ಇನ್ನೂ ನಿಂತಿಲ್ಲ, ಇನ್ನೊಬ್ಬರನ್ನು ಸೈಡಿಗೆ ತಳ್ಳಿ ಆಗಲೇ ಸಿಎಂ ಕುರ್ಚಿ ಮೇಲೆ ಟವೆಲ್ ಹಾಕಿದ್ದೀರಲ್ಲ ಮಿಸ್ಟರ್ ಸಿದ್ದರಾಮಯ್ಯ? ಇದು ಸ್ವಾತಂತ್ರ್ಯ ಸಂಗ್ರಾಮವೋ ಅಥವಾ ಕರ್ಚಿಗಾಗಿ ಹೋರಾಟವೋ?

ನಿಮ್ಮಂತಹ ರಾಜಕೀಯ ಭಸ್ಮಾಸುರರು ಇರುವ ಕಾಂಗ್ರೆಸ್ ಪಕ್ಷದ ಹತ್ತಿರಕ್ಕೆ ಬಂದವರೆಲ್ಲ ಸುಟ್ಟು ಭಸ್ಮವಾಗಿದ್ದಾರೆ. ನಮ್ಮ ಪಕ್ಷ ಇರಲಿ, ಪಕ್ಕದ ಮಹಾರಾಷ್ಟ್ರದಲ್ಲಿ ಶಿವಸೇನೆ ಗತಿ ಏನಾಯಿತು? ಯುಪಿಎ-1 ಸರಕಾರಕ್ಕೆ ಬೆಂಬಲ ಕೊಟ್ಟ ತಪ್ಪಿಗೆ 65 ಕ್ಷೇತ್ರ ಗೆದ್ದಿದ್ದ ಕಮ್ಯುನಿಸ್ಟರು ಈಗೆಲ್ಲಿದ್ದಾರೆ? ನಿಮ್ಮ ಸಹವಾಸ ಮಾಡಿದವರಿಗೆಲ್ಲ ಇದೇ ಗತಿ!

ಅಧಿಕಾರದ ದುರಾಸೆಗೆ ಅನ್ಯಪಕ್ಷಗಳನ್ನು ನಂಬಿಸಿ ಕತ್ತು ಕುಯ್ಯವ ಕಾಂಗ್ರೆಸ್ ಪಕ್ಷ ಎಸಗಿದ ಪಾಪಕ್ಕೆ ಈಗ ಫಲ ಉಣ್ಣುತ್ತಿದೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಸೋಗಲಾಡಿ ಸಿದ್ದರಾಮಾಯಣ ಶುರುವಾಗಿದೆ. ಈ ಸೋಗಲಾಡಿ ಸಿದ್ದಯ್ಯನ ಅಸಲಿಯೆತ್ತು ಏನು ಎಂಬುದು ಜನರಿಗೆ ಚೆನ್ನಾಗಿ ಗೊತ್ತಿದೆ.

Tags: FEATURED
ShareTweetSendShare

Discussion about this post

Related News

Actor Vijay set to make debut in Tamil Nadu politics

ಅಣ್ಣಾಮಲೈ ಬೆನ್ನಲ್ಲೇ ನಟ ವಿಜಯ್ ತಮಿಳು ಪಾಲಿಟಿಕ್ಸ್ ಗೆ ಎಂಟ್ರಿ : ಸನಾತನ ಧರ್ಮದ ವಿರುದ್ಧ ನಿಂತವರಿಗೆ ಶುರುವಾಗಿದೆ ನಡುಕ

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

ಕರಾವಳಿ ಭದ್ರತಾ ಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

Latest News

afspa-extended-in-manipur-for-6-months-from-october-1-barring-19-police-stations-of-valley

Manipura ಮಣಿಪುರದಲ್ಲಿ ಮತ್ತೆ ಜಾರಿಯಾಗಿರುವ  ಆಫ್ಸ್ಪ ಕಾಯ್ದೆಯ ಬಗ್ಗೆ ನಿಮಗೆಷ್ಟು ಗೊತ್ತು..?

Actor Vijay set to make debut in Tamil Nadu politics

ಅಣ್ಣಾಮಲೈ ಬೆನ್ನಲ್ಲೇ ನಟ ವಿಜಯ್ ತಮಿಳು ಪಾಲಿಟಿಕ್ಸ್ ಗೆ ಎಂಟ್ರಿ : ಸನಾತನ ಧರ್ಮದ ವಿರುದ್ಧ ನಿಂತವರಿಗೆ ಶುರುವಾಗಿದೆ ನಡುಕ

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್