ಹಣಕಾಸು ಸಚಿವೆ ರಾಜೀನಾಮೆ ಕೊಟ್ರೆ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರ ಖರ್ಗೆಯವರೇ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿಯ ನಳೀನ್ ಕುಮಾರ್ ಕಟೀಲ್ ಹಾಗೂ ವಿಜಯೇಂದ್ರ ಅವರ ವಿರುದ್ಧ ಜನಪ್ರತಿನಿಧಿ ನ್ಯಾಯಾಲಯದ ಆದೇಶದ ಅನುಸಾರ ಎಫ್ಐಆರ್ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಿರ್ಮಲಾ ಸೀತಾರಾಮನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಶಾಸಕ ಶರತ್ ಬಚ್ಚೇಗೌಡ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿಂದು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಿಯಾಂಕ ಖರ್ಗೆ, ಚುನಾವಣಾ ಬಾಂಡ್ಗಳು ಅಸಾಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ಈಗಾಗಲೇ ಐತಿಹಾಸಿಕ ತೀರ್ಪು ನೀಡಿದೆ. ಬಿಜೆಪಿ ಸದಸ್ಯರ ಭ್ರಷ್ಟಾಚಾರದ ಆರೋಪಗಳಿಗೆ ತಮ್ಮ ಪಕ್ಷ ಅಂಜುವುದಿಲ್ಲ ಎಂದಿದ್ದಾರೆ.
ಶರತ್ ಬಚ್ಚೇಗೌಡ ಮಾತನಾಡಿ, ಚುನಾವಣಾ ಬಾಂಡ್ ಮೂಲಕ ಅತೀ ಹೆಚ್ಚು ದೇಣಿಗೆ ಬಿಜೆಪಿ ಪಡೆದಿದೆ. ಇದೆಲ್ಲೆಕ್ಕೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರೂವಾರಿ ಎಂದು ಆರೋಪಿಸಿದ್ದಾರೆ.