ಬಾಗಿನ ಸಲ್ಲಿಸುವುದು ನಮ್ಮ ಭಾಗ್ಯ
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ನವಿಲುತೀರ್ಥ ಇಂದಿರಾಗಾಂಧಿ ಜಲಾಶಯದಲ್ಲಿ ಮಲಪ್ರಭಾ ನದಿಗೆ ಗಂಗಾಪೂಜೆಯ ಮೂಲಕ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಾಗಿನ ಅರ್ಪಿಸಿದರು.
ನಂತರ ಮಾತನಾಡಿದ ಅವರು, ಈ ವರ್ಷ ಚೆನ್ನಾಗಿ ಮಳೆಯಾಗಿರುವುದರಿಂದ ನವಿಲುತೀರ್ಥ ಇಂದಿರಾಗಾಂಧಿ ಜಲಾಶಯ ಪೂರ್ಣಪ್ರಮಾಣದಲ್ಲಿ ಭರ್ತಿಯಾಗಿದೆ. ೨ ಸಾವಿರದ ೭೯ ಅಡಿ ಆಳವಿರುವ ಜಲಾಶಯದಲ್ಲಿ ೩೭.೭. ಟಿಎಂಸಿ ನೀರಿನ ಸಂಗ್ರಹವಾಗಿದೆ. ಇದರಿಂದ ಈ ವರ್ಷ ಈ ಭಾಗದ ರೈತರ ಕೃಷಿ ಚಟುವಟಿಕೆಗಳು ಹಾಗೂ ಕುಡಿಯುವ ನೀರಿಗೆ ಯಾವುದೇ ರೀತಿ ನೀರಿನ ಕೊರತೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರತಿವರ್ಷದಂತೆ ಹುಬ್ಬಳ್ಳಿ (Hubballi), ಧಾರವಾಡ (Dharawada) ಸೇರಿದಂತೆ ಸವದತ್ತಿ, ಬೈಲಹೊಂಗಲ ತಾಲೂಕುಗಳಿಗೆ ಮಲಪ್ರಭಾ ಜಲಾಶಯದಿಂದ ಕುಡಿಯುವ ನೀರು ಬಿಡುಗಡೆ ಮಾಡಲಾಗುತ್ತಿದೆ. ಬೇಸಿಗೆ ಕಾಲದಲ್ಲಿ ಜನ, ಜಾನುವಾರುಗಳಿಗೆ ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ನೀರಿನ ಸಮಸ್ಯೆ ಇರುವುದಿಲ್ಲ ಎಂದು ಇದೇ ವೇಳೆ ಸಚಿವರ ಭರವಸೆ ನೀಡಿದರು.
ಶಾಸಕ ಎನ್.ಎಚ್ ಕೋನರೆಡ್ಡಿ, ವಿಶ್ವಾಸ್ ವೈದ್ಯ, ಬಿ.ವಿ. ಚಿಮ್ಮನಕಟ್ಟಿ ಸೇರಿದಂತೆ ನೀರಾವರಿ ಇಲಾಖೆ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.