ಎಲ್ಲ ಅಧಿಕಾರಿಗಳು ತಮ್ಮ ಅಧೀನ ಸಿಬ್ಬಂದಿಗಳನ್ನು ಸಮನ್ವಯಗೊಳಿಸಿ
ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿನ ಸರ್ಕಾರಿ ಆಸ್ತಿಗಳನ್ನು ಗುರುತಿಸಿ, ಲ್ಯಾಂಡ್ ಬೀಟ್ ದತ್ತಾಂಶದಲ್ಲಿ ಅಪ್ಲೋಡ್ ಮಾಡುವ ಕಾರ್ಯದಲ್ಲಿ ಕನಿಷ್ಟ ಶೇ. ೯೫ ರಷ್ಟು ಪ್ರಗತಿ ಸಾಧಿಸಬೇಕು ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ ಕಂದಾಯ ಇಲಾಖಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸರ್ಕಾರಿ ಆಸ್ತಿಗಳನ್ನು ಗುರುತಿಸಿ, ಹದ್ದುಬಸ್ತು ಮಾಡಿಕೊಳ್ಳುವ ಕುರಿತಂತೆ ಸರ್ಕಾರ ಲ್ಯಾಂಡ್ ಬೀಟ್ ಕಾರ್ಯಕ್ರಮ ಜಾರಿಗೊಳಿಸಿದೆ.
ಜಿಲ್ಲೆಯಲ್ಲಿ ಪ್ರಸ್ತುತ ಸರ್ಕಾರಿ ಆಸ್ತಿಗಳ ದತ್ತಾಂಶ ಅಪ್ಲೋಡ್ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಲ್ಯಾಂಡ್ ಬೀಟ್ ಕಾರ್ಯಕ್ರಮದಡಿ ದತ್ತಾಂಶ ಅಪ್ಲೋಡ್ ಮಾಡುವ ಕಾರ್ಯ ಜಿಲ್ಲೆಯಲ್ಲಿ ಕನಿಷ್ಟ ೯೫ ರಷ್ಟು ಸಾಧನೆಯಾಗಬೇಕು. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಎಲ್ಲ ಅಧಿಕಾರಿಗಳು ತಮ್ಮ ಅಧೀನ ಸಿಬ್ಬಂದಿಗಳನ್ನು ಸಮನ್ವಯಗೊಳಿಸಿ, ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ.