ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದ ಡೆತ್ ನೋಟ್ ಸಿಕ್ಕಿದೆ ( lecture suicide)
ಚಾಮರಾಜನಗರ : ಹುಟ್ಟು ಹಬ್ಬದ ಸಂಭ್ರಮದಲ್ಲಿರಬೇಕಾಗಿದ್ದ ಉಪನ್ಯಾಸಕಿಯೊಬ್ಬರು ತಮ್ಮ ಹುಟ್ಟು ಹಬ್ಬದ ದಿನವೇ ಆತ್ಮಹತ್ಯೆಗೆ ಶರಣಾದ ( lecture suicide)ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದವರನ್ನು ಚಂದನಾ (26) ಎಂದು ಗುರುತಿಸಲಾಗಿದೆ. ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ನಿವಾಸಿಯಾಗಿದ್ದ ಚಂದನಾ JSS ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದರು.
JSS ಕಾಲೇಜಿನ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಚಂದನಾ ತನ್ನ ಸಾವಿಗೆ ತಾನೇ ಕಾರಣ ಎಂದು ಡೆತ್ ನೋಟ್ ಬೇರೆ ಬರೆದಿಟ್ಟಿದ್ದಾರೆ. ಪ್ರಕರಣ ಸಂಬಂಧ ಚಾಮರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ಓದಿ : Vitla skeleton : ವಿಟ್ಲದ ಕಾಡಿನಲ್ಲಿ ತಲೆ ಬುರುಡೆ ಪತ್ತೆ : ಪ್ರಕರಣ ಭೇದಿಸಿದ ಪೊಲೀಸರು
Discussion about this post