ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿರುವ ಹಿನ್ನಲೆಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರಗಳಲ್ಲಿ 100 ರೂಪಾಯಿ ಇಳಿಕೆ ಮಾಡಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಸಂಸ್ಥೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಅನಿಲ ದರಗಳು ಅಗ್ಗವಾಗಿರುವುದರಿಂದ ಬೆಲೆ ಕಡಿತ ಮಾಡಲಾಗಿದೆ ಎಂದಿದೆ.
ನೂತನ ದರಗಳು ಇಂದಿನಿಂದಲೇ ಜಾರಿಗೆ ಬರಲಿದ್ದು, ಹೀಗಾಗಿ ಪ್ರತೀ ಸಬ್ಸಿಡಿ ರಹಿತ ಅನಿಲ ಸಿಲಿಂಡರ್ ಬೆಲೆಯಲ್ಲಿ 100.50 ರೂ ಕಡಿತವಾಗಲಿದೆ.
ಇನ್ನು ಸಬ್ಸಿಡಿ ಸಹಿತ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ.
Discussion about this post