ಮಧ್ಯಪ್ರದೇಶ : ಭೋಪಾಲ್ ನ ಕಮಲಾ ನೆಹರೂ ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿ, ನಾಲ್ಕು ನವಜಾತ ಶಿಶುಗಳು ಸಜೀವ ದಹನಗೊಂಡಿದೆ. ಆಸ್ಪತ್ರೆಯ ನವಜಾತ ಶಿಶು ನಿಗಾ ಘಟಕ ( SNCU ) ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಸೋಮವಾರ ರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದ ಮೊದಲು ಬೆಂಕಿ ಕಾಣಿಸಿಕೊಂಡಿತ್ತು, ಈ ವೇಳೆ ವಾರ್ಡ್ ನಲ್ಲಿ 40 ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದರು. ತಕ್ಷಣ ಎಚ್ಚೆತ್ತುಕೊಂಡ ಆಸ್ಪತ್ರೆ ಸಿಬ್ಬಂದಿ ಮಕ್ಕಳನ್ನು ರಕ್ಷಿಸಿದ್ದಾರೆ. ಆದರೆ ನಾಲ್ಕು ಮಕ್ಕಳನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.
ಘಟನೆ ನಡೆದ ಬೆನ್ನಲ್ಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದರು. ಬೆಂಕಿಯ ಅಬ್ಬರ ಹೆಚ್ಚಾಗಿದ್ದ ಹಿನ್ನಲೆಯಲ್ಲಿ 10 ವಾಹನಗಳನ್ನು ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿತ್ತು. ಇದೀಗ ಘಟನೆ ಕುರಿತಂತೆ ತನಿಖೆಗೆ ಮಧ್ಯಪ್ರದೇಶ ಸರ್ಕಾರ ಆದೇಶಿಸಿದ್ದು, ಮೃತ ಮಕ್ಕಳ ಪೋಷಕರಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.
madhya-pradesh-fire-in-paediatric-icu-of-bhopals-kamala-nehru-hospital-at-least-4-children-die
Discussion about this post