ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಆದೇಶವನ್ನು ಪ್ರಶ್ನಿಸಿ ಶಿವಸೇನೆ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು
ಮುಂಬೈ : ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡ ಹಿನ್ನಲೆಯಲ್ಲಿ, ಬಹುಮತ ಸಾಬೀತುಪಡಿಸುವಂತೆ ಉದ್ಧವ್ ಠಾಕ್ರೆ ಸರ್ಕಾರಕ್ಕೆ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಆದೇಶ ನೀಡಿದ್ದರು. ವಿಶೇಷ ಅಧಿವೇಶನ ಕರೆದು ಸಂಜೆ 5 ಗಂಟೆಯ ಒಳಗಾಗಿ ವಿಶ್ವಾಸಮತ ಪ್ರಕ್ರಿಯೆ ಮುಗಿಸಿ ಎಂದು ವಿಧಾನಸಭೆ ಕಾರ್ಯದರ್ಶಿಗೆ ಸೂಚಿಸಿದ್ದರು.
ರಾಜ್ಯಪಾಲರ ಆದೇಶದ ವಿರುದ್ಧ ಶಿವಸೇನೆ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಅನರ್ಹತೆ ಪ್ರಕರಣವೇ ಇತ್ಯರ್ಥವಾಗದ ಹೊರತು, ವಿಶ್ವಾಸಮತ ಪರೀಕ್ಷೆ ನಡೆಸಲು ಹೇಗೆ ಸಾಧ್ಯ ಎಂದು ರಾಜ್ಯಪಾಲರ ಆದೇಶಕ್ಕೆ ತಡೆ ನೀಡುವಂತೆ ಮನವಿ ಸಲ್ಲಿಸಿತ್ತು.
ಈ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಶಿವಸೇನೆ ಅರ್ಜಿಯನ್ನು ವಜಾಗೊಳಿಸಿದ್ದು, ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದಿದೆ. ಜೊತೆಗೆ ನಾಳೆಯೇ ಅಂದರೆ ಗುರುವಾರ ವಿಶ್ವಾಸ ಮತ ಸಾಬೀತುಪಡಿಸಿ ಎಂದು ಉದ್ಧವ್ ಸರ್ಕಾರಕ್ಕೆ ಆದೇಶಿಸಿದೆ.
ಇದಕ್ಕೂ ಮುನ್ನ ನಡೆದ ವಾದ ಪ್ರತಿವಾದ ಸಂದರ್ಭದಲ್ಲಿ ರೆಬಲ್ ಶಾಸಕರ ಪರ ವಾದ ಮಂಡಿಸಿದ ವಕೀಲರು, ಶಿವಸೇನೆಯಲ್ಲಿ ಈಗ ಕೇವಲ 16 ಶಾಸಕರಿದ್ದಾರೆ ಹೀಗಾಗಿ ವಿಶ್ವಾಸ ಮತಯಾಚನೆಗೆ ತಡೆ ನೀಡಬೇಡಿ ಎಂದು ಮನವಿ ಮಾಡಿದರು. ಇನ್ನು ರಾಜ್ಯಪಾಲರ ಪರ ವಾದ ಮಂಡಿಸಿದ ವಕೀಲರು ವಿಶ್ವಾಸಮತ ಕುರಿತಂತೆ ರಾಜಭವನದ ಆದೇಶವನ್ನು ಯಾರು ಪ್ರಶ್ನಿಸುವಂತಿಲ್ಲ ಅಂದಿದ್ದಾರೆ.
ಇದೇ ವೇಳೆ ವಿಶ್ವಾಸಮತ ಯಾಚನೆಯಲ್ಲಿ ಪಾಲ್ಗೊಳ್ಳುವಂತೆ ಜೈಲಿನಲ್ಲಿರುವ NCP ಶಾಸಕರಾದ ಅನಿಲ್ ದೇಶ್ ಮುಖ್ ಮತ್ತು ನವಾಬ್ ಮಲಿಕ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಜಾರಿ ನಿರ್ದೇಶನಾಲಯದ ರಕ್ಷಣೆಯಲ್ಲಿ ಮತದಾನದಲ್ಲಿ ಪಾಲ್ಗೊಳ್ಳುವಂತೆ ಸೂಚಿಸಿದೆ.
ಅತ್ತ ಸುಪ್ರೀಂಕೋರ್ಟ್ ಆದೇಶ ಹೊರ ಬರುತ್ತಿದ್ದಂತೆ ರೆಬಲ್ ಶಾಸಕರ ಬಣದಲ್ಲಿ ನಗು ಮೂಡಿದ್ದು, ಗುವಾಹಟಿಯಿಂದ ಗೋವಾಗೆ ಬಂದಿಳಿದಿದೆ. ಗುರುವಾರ ಬೆಳಗ್ಗೆ ನೇರವಾಗಿ ವಿಧಾನಸಭೆಗೆ ರೆಬಲ್ ಶಾಸಕರು ಆಗಮಿಸುವ ಸಾಧ್ಯತೆಗಳಿದೆ. “I am resigning as the Chief Minister,” Maharashtra CM Uddhav Thackeray announces
Discussion about this post