ನೊಬೆಲ್ ಪ್ರಶಸ್ತಿ ಪುರಸ್ಕೃತ ಮಲಾಲಾ ಪಾಕಿಸ್ತಾನ ಕ್ರಿಕೆಟ್ ಅಕಾಡೆಮೆ ಅಧಿಕಾರಿಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಂಗಳವಾರ ಮಲಾಲಾ ಯೂಸೂಫ್ ಜಾಯಿ ಅಸರ್ ಅನ್ನುವವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮಲಾಲಾ ಕೈ ಹಿಡಿದ ವರನ ಬಗ್ಗೆ ಹೆಚ್ಚಿನ ಮಾಹಿತಿಗಳು ಲಭ್ಯವಾಗಿಲ್ಲ. ಹೆಸರು ಅಸರ್ ಅನ್ನುವುದಷ್ಟೇ ರಿವೀಲ್ ಆಗಿದ್ದು, ಇವರು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಹೈ ಪರ್ಫಾರ್ಮೆನ್ಸ್ ಸೆಂಟರ್ನ ಜನರಲ್ ಮ್ಯಾನೇಜರ್ ಎಂದು ಕೆಲ ಅಂತರರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದೆ.

ಬರ್ಮಿಂಗ್ಹ್ಯಾಂನ ನಿವಾಸದಲ್ಲಿ ಕುಟುಂಬ ಸದಸ್ಯರ ಉಪಸ್ಥಿತಿಯಲ್ಲಿ ವಿವಾಹ ನೆರವೇರಿದ್ದು, ಈ ವಿಷಯವನ್ನು ಟ್ವೀಟ್ ಮಾಡಿರುವ ಮಲಾಲಾ ತಾವು ವಿವಾಹವಾಗಿರುವ ವಿಷಯವನ್ನು ಬಹಿರಂಗಪಡಿಸಿದ್ದಾರೆ.

24 ವರ್ಷದ ಮಲಾಲಾ ಪಾಕಿಸ್ತಾನದಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಧ್ಚನಿ ಎತ್ತಿದ್ದರು. ಈ ಕಾರಣಕ್ಕಾಗಿ ಅತಿ ಚಿಕ್ಕ ವಯಸ್ಸಿನಲ್ಲಿ ನೊಬೆಲ್ ಶಾಂತಿ ಪುರಸ್ಕಾರವನ್ನೂ ಪಡೆದಿದ್ದರು. ಈ ನಡುವೆ ಬಾಲಕಿಯರ ಶಿಕ್ಷಣ ಹಕ್ಕಿಗಾಗಿ ಹೋರಾಡಿದ ಕಾರಣಕ್ಕೆ ತಾಲಿಬಾನಿಗಳು ಮಲಾಲಾ ಮೇಲೆ ಗುಂಡಿನ ದಾಳಿ ನಡೆಸಿದ್ದರು.
Discussion about this post