ಮೆಟ್ರೋ ಫ್ಲೈಓವರ್ ಅಡಿಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಸ್ಲ್ಯಾಬ್ ಒಂದು ಬಿದ್ದು ಕಾರು ಜಖಂ ಆಗಿದ್ದು ಮಲಯಾಳಂ ನಟಿ ಅರ್ಚನಾ ಕವಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಕೊಚ್ಚಿಯಲ್ಲಿ ನಡೆದಿದೆ. ಈ ಬಗ್ಗೆ ಅರ್ಚನಾ ಟ್ವೀಟ್ ಮಾಡಿದ್ದು ತನ್ನ ಚಾಲಕನಿಗೆ ನಷ್ಟ ಪರಿಹಾರ ಸಲ್ಲಿಸುವಂತೆ ಮನವಿ ಮಾಡಿದ್ದಾರೆ.
ತೆಲುಗಿನ ‘ಬ್ಯಾಕ್ ಬೆಂಚ್ ಸ್ಟುಡೆಂಟ್’ ಚಿತ್ರದ ಮೂಲಕ ಟಾಲಿವುಡ್ಗೆ ಎಂಟ್ರಿಕೊಟ್ಟಿದ್ದ ಅರ್ಚನಾ ಗಂಡಾಂತರದಿಂದ ಪಾರಾಗಿದ್ದಾರೆ. ಬುಧವಾರ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಮಯದಲ್ಲಿ ಮೆಟ್ರೋ ಸ್ಲ್ಯಾಬ್ ಅವರ ಕಾರಿನ ಮೇಲೆ ಬಿದ್ದಿದೆ.
“ನಾವು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದೇವೆ. ಕಾರಿನಲ್ಲಿ ಏರ್ ಪೋರ್ಟ್ ಗೆ ಹೋಗುತ್ತಿದ್ದ ವೇಳೆ ಕಾರಿನ ಮೇಲೆ ಮೆಟ್ರೋ ಕಾಮಗಾರಿಯ ಕಾಂಕ್ರಿಟ್ ಬಿದ್ದವು. ಸದ್ಯ ಯಾವುದೇ ಅಪಾಯ ಸಂಭವಿಸಿಲ್ಲ. ಆದರೆ ಮೆಟ್ರೋ ಅಧಿಕಾರಿಗಳು ಮತ್ತು ಪೊಲೀಸರು ಈ ಬಗ್ಗೆ ಗಮನ ಹರಿಸಬೇಕು. ಕಾರಿಗೆ ಡ್ಯಾಮೇಜ್ ಆಗಿದೆ. ಹೀಗಾಗಿ ಕಾರಿನ ಮಾಲೀಕರಿಗೆ ಪರಿಹಾರ ನೀಡಬೇಕು. ಮುಂದಿನ ದಿನದಲ್ಲಿ ಈ ರೀತಿ ಅವಘಡ ಸಂಭವಿಸಿದಂತೆ ಜಾಗೃತಿವಹಿಸಬೇಕು’ ಎಂದು ಮನವಿ ಮಾಡಿದ್ದಾರೆ.
ನಟಿ ಅರ್ಚನಾ ಕವಿ ಟ್ವೀಟ್ಗೆ ಮೆಟ್ರೋ ಅಧಿಕಾರಿಗಳು ‘ಈ ಘಟನೆಯನ್ನ ಗಂಭೀರವಾಗಿ ಪರಿಗಣಿಸಿ ಕಾರು ಚಾಲಕನ ಜೊತೆ ಮಾತನಾಡುವುದಕ್ಕೆ ಪ್ರಯತ್ನ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಈ ರೀತಿಯ ಅವಘಡ ಸಂಭವಿಸದಂತೆ ಸುರಕ್ಷಿತವಾಗಿ ಕ್ರಮ ಕೈಗೊಳ್ಳುತ್ತೇನೆ” ಎಂದು ಪ್ರತಿಕ್ರಿಯಿಸಿದ್ದಾರೆ.
ನಟಿ ಅರ್ಚನಾ ಕವಿ ‘ಹನಿ ಬಿ’, ‘ಪಟ್ಟಂ ಪೋಲೆ, ‘ನಾಡೋಡಿಮನಂ’ ಸಿನಿಮಾಗಳಲ್ಲಿ ನಟಿಸಿದ್ದಾರೆ. ಜೊತೆಗೆ ತಮಿಳಿನ ‘ಅರವಾನ್’, ‘ಜ್ಞಾನ ಕಿರುಕ್ಕುನ್’ ಅಂತಹ ಚಿತ್ರದಲ್ಲೂ ಅಭಿನಯಿಸಿದ್ದಾರೆ.
Discussion about this post