ಮಂಗಳೂರು : 2020ರ ಜನವರಿ ತಿಂಗಳಲ್ಲಿ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಆರೋಪಿ ಆದಿತ್ಯ ರಾವ್ ದೋಷಿ ಎಂದು ನ್ಯಾಯಾಲಯ ಘೋಷಿಸಿದ್ದು ಬುಧವಾರ ಶಿಕ್ಷೆಯ ಪ್ರಮಾಣವನ್ನು ನಾಲ್ಕನೇ ಹೆಚ್ಚುವರಿ ನ್ಯಾಯಾಲಯ ಘೋಷಿಸಿದೆ.
ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ 1967 ರ ಸೆಕ್ಷನ್ 16 ಅಡಿಯಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 10000 ದಂಡ. ದಂಡ ಕಟ್ಟಲು ವಿಫಲವಾದರೆ 6 ತಿಂಗಳ ಸರಳ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ. ಸ್ಫೋಟಕ ವಸ್ತುಗಳ ಕಾಯ್ದೆ 1908ರ ಸೆಕ್ಷನ್ 4 ರ ಪ್ರಕಾರ 5 ವರ್ಷಗಳ ಕಠಿಣ ಸೆರೆವಾಸ ಮತ್ತು 10000 ರೂ. ದಂಡ ಮತ್ತು ದಂಡ ಕಟ್ಟಲು ವಿಫಲವಾದರೆ 6 ತಿಂಗಳ ಜೈಲು ಶಿಕ್ಷೆಯ ತೀರ್ಪು ಪ್ರಕಟಿಸಲಾಗಿದೆ.
2018ರಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಎರಡು ಬಾರಿ ಹುಸಿ ಬಾಂಬ್ ಕರೆ, ಬೆಂಗಳೂರು ರೈಲು ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಹಾಗೂ ಎರಡು ಕಳ್ಳತನ ಪ್ರಕರಣಗಳು ಈತನ ಮೇಲಿದೆ. ಆದಿತ್ಯ ರಾವ್ ಈ ಹಿಂದೆ ಕೆಲಸ ಕೇಳಿಕೊಂಡು ಹೋದಾಗ, ತನಗೆ ಕೆಲಸ ನೀಡಿರಲಿಲ್ಲ ಎಂಬ ಸಿಟ್ಟಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎರಡು ಬಾರಿ ಹುಸಿ ಬಾಂಬ್ ಕರೆ ಮಾಡಿ ಜೈಲು ಸೇರಿದ್ದ.
ಎಂಬಿಎ ವ್ಯಾಸಂಗ ಮಾಡಿರುವ ಆದಿತ್ಯ ರಾವ್ ಬಳಿಕ ಬೆಂಗಳೂರಿನ ಎಂ.ಜಿ. ರಸ್ತೆಯಲ್ಲಿರುವ ಪ್ರತಿಷ್ಠಿತ ಬಹುರಾಷ್ಟ್ರೀಯ ಬ್ಯಾಂಕ್ನಲ್ಲಿ ಮಾರುಕಟ್ಟೆ ವಿಭಾಗದಲ್ಲಿ ವ್ಯವಸ್ಥಾಪಕ ಹುದ್ದೆ ಅಲಂಕರಿಸಿದ್ದ, ಒಂದು ವರ್ಷದ ಬಳಿಕ ಅಲ್ಲಿ ಕೆಲಸ ಬಿಟ್ಟು ಮತ್ತೂಂದು ಬ್ಯಾಂಕ್ ಸೇರಿದ್ದ. ಉತ್ತಮ ವೇತನವಿದ್ದರೂ ಆ ಕೆಲಸವನ್ನು ಬಿಟ್ಟು ಮೂಡುಬಿದಿರೆಯ ಕಾಲೇಜೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಸೇರಿದ್ದ. ಬಳಿಕ ಮಂಗಳೂರಿನ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸೆಕ್ಯೂರಿಟಿ ಕೆಲಸಕ್ಕೆ ಸೇರಿದ್ದ. ಇನ್ನು ಈತನನ್ನು ಮನೆಯವರೊಂದಿಗೆ ಹಲವು ವರ್ಷಗಳ ಹಿಂದೆಯೇ ಸಂಪರ್ಕ ಕಡಿದುಕೊಂಡಿದ್ದ.
A live explosive was found in an unattended bag near the airport gate on January 20, 2020. Two days later Aditya Rao surrendered before the police
Discussion about this post