ಮಂಗಳೂರು : ಬೀಡಿ ಕೊಡಲೆಂದು ಬೀಡಿ ಬ್ರ್ಯಾಂಚ್ಗೆ ತೆರಳುತ್ತಿದ್ದ ಮಹಿಳೆಯರಿಗೆ ರೈಲು ಡಿಕ್ಕಿ ಹೊಡೆದು ಇಬ್ಬರು ಮಹಿಳೆಯರು ಮೃತಪಟ್ಟಿರುವ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ. ವಸಂತಿ(50), ಪ್ರೇಮಾ (48) ಎಂದು ಗುರುತಿಸಲಾಗಿದೆ.
ಬೀಡಿ ಕಾರ್ಮಿಕರಾಗಿದ್ದ ಇವರಿಬ್ಬರು ದಿನಂಪ್ರತಿ ಕುಡುಪ್ಪಾಡಿ ದೋಟ ಎಂಬಲ್ಲಿಂದ ಮಹಾಕಾಳಿಪಡ್ಪುವಿನಲ್ಲಿರುವ ಬ್ರ್ಯಾಂಚ್ ಗೆ ರೈಲು ಹಳಿಯನ್ನು ದಾಟಿ ಬೀಡಿ ಕೊಂಡೊಯ್ಯುತ್ತಿದ್ದರು. ಅದರಂತೆ ಇಂದು ಬೆಳಗ್ಗೆಯೂ ಹಳಿ ದಾಟುತ್ತಿದ್ದಾಗ ಕೇರಳ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ರೈಲಿನಡಿಗೆ ಸಿಲುಕಿ ಮೃತಪಟ್ಟಿದ್ದಾರೆ.
ಹಳಿ ದಾಟುತ್ತಿದ್ದ ವೇಳೆ ರೈಲಿನ ಆಗಮನ ಮಹಿಳೆಯರ ಗಮನಕ್ಕೆ ಬಂದಿರಲಿಲ್ಲ ಎನ್ನಲಾಗಿದೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Discussion about this post