ಮಂಗಳೂರು : ನ್ಯಾಯಾಲಯದ ಆದೇಶದ ಹೊರತಾಗಿಯೂ ಮಂಗಳೂರಿನಲ್ಲಿ ಹಿಜಾಬ್ ವಿವಾದ ನಿಂತಿಲ್ಲ. ನಗರದ ಹಂಪನಕಟ್ಟೆಯ ಮಂಗಳೂರು ವಿವಿ ಕಾಲೇಜಿನಲ್ಲಿ ಮತ್ತೆ ಹಿಜಾಬ್ ವಿವಾದ ಪ್ರಾರಂಭವಾಗಿತ್ತು. ಈ ಹಿನ್ನಲೆಯಲ್ಲಿ ಶಿಸ್ತು ಉಲ್ಲಂಘಿಸಿದ ಕಾರಣ ಪ್ರಾಂಶುಪಾಲರು ವಿದ್ಯಾರ್ಥಿನಿಯರಿಗೆ ನೋಟಿಸ್ ನೀಡಿದ್ದರು.
ಈ ಪೈಕಿ ಇಬ್ಬರು ವಿದ್ಯಾರ್ಥಿನಿಯರು ನೋಟಿಸ್ ಗೆ ಉತ್ತರಿಸಿದ್ದು, ಈ ಪೈಕಿ ಒಬ್ಬ ವಿದ್ಯಾರ್ಥಿನಿ ಹಿಜಾಬ್ ತೆಗೆದಿರಿಸಿ ತರಗತಿಗೆ ಹಾಜರಾಗಿದ್ದಾಳೆ. ಇನ್ನೊಬ್ಬ ವಿದ್ಯಾರ್ಥಿನಿಗೆ ನೋಟಿಸ್ ಗೆ ಉತ್ತರಿಸಿಲ್ಲ.
ಒಟ್ಟು 15 ವಿದ್ಯಾರ್ಥಿನಿಯರು ಹಿಜಾಬ್ ಇಲ್ಲದೆ ತರಗತಿ ಪ್ರವೇಶಿಸು ನಿರಾಕರಿಸಿದ್ದರು. ಹೀಗಾಗಿ ಸಾಕಷ್ಟು ಗೊಂದಲ ಪರಿಸ್ಥಿತಿ ಏರ್ಪಟ್ಟಿತ್ತು. ಕಾನೂನು ಸುವ್ಯವಸ್ಥೆ ಸಮಸ್ಯೆಯೂ ತಲೆದೋರಿತ್ತು. ಈ ನಡುವೆ ಮೂವರು ವಿದ್ಯಾರ್ಥಿನಿಯರು ಪತ್ರಿಕಾಗೋಷ್ಟಿಯನ್ನೂ ನಡೆಸಿದ್ದರು. ಈ ಹಿನ್ನಲೆಯಲ್ಲಿ ಮಾಧ್ಯಮಗೋಷ್ಟಿ ನಡೆಸಿದ ಮೂವರು ವಿದ್ಯಾರ್ಥಿಗಳಿಗೆ ನೋಟಿಸ್ ನೀಡಲಾಗಿತ್ತು. ಈ ಬಗ್ಗೆ ಒಬ್ಬ ವಿದ್ಯಾರ್ಥಿನಿಗೆ ನಿಯಮಗಳಿಗೆ ಗೌರವ ಕೊಟ್ಟು ತರಗತಿಗೆ ಹಾಜರಾಗಿದ್ದಾಳೆ.
Discussion about this post