ಮಂಗಳೂರು : ಕೊರೋನಾ ಕಾರಣದಿಂದ ಸ್ಥಗಿತಗೊಂಡಿದ್ದ ಮಂಗಳೂರು ಸೆಂಟ್ರಲ್ ಸುಬ್ರಹ್ಮಣ್ಯ ಹಾಗೂ ಮಂಗಳೂರು ಸೆಂಟ್ರಲ್-ಕಬಕ ಪುತ್ತೂರು ಪ್ಯಾಸೆಂಜರ್ ರೈಲುಗಳ ಸಂಚಾರ ಮತ್ತೆ ಪ್ರಾರಂಭವಾಗುವ ಮುನ್ಸೂಚನೆ ಇರಲಿಲ್ಲ. ಪ್ರಯಾಣಿಕರ ಕೊರತೆಯ ನೆಪವೊಡ್ಡಿ ರೈಲು ಸಂಚಾರ ನಿಲ್ಲಿಸಲಾಗುತ್ತಿದೆ ಅನ್ನುವ ಸುದ್ದಿಯೂ ಹರಿದಾಡಿತ್ತು. ಇದೀಗ ಎಲ್ಲಾ ಅಡೆ ತಡೆಗಳು ನಿವಾರಣೆಯಾಗಿದ್ದು ಇಂದಿನಿಂದ ಈ ಮಾರ್ಗದಲ್ಲಿ ರೈಲು ಸಂಚಾರ ಪ್ರಾರಂಭವಾಗಲಿದೆ.
ಮಂಗಳೂರು ಸೆಂಟ್ರಲ್-ಸುಬ್ರಮಣ್ಯ ರಸ್ತೆ ನಡುವೆ ಕಾಯ್ದಿರಿಸದ ಎಕ್ಸ್ಪ್ರೆಸ್ ರೈಲು (06489) ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಬೆಳಗ್ಗೆ 10 ಗಂಟೆಗೆ ಹೊರಡಲಿದ್ದು, ಮಂಗಳೂರು ಜಂಕ್ಷನ್ ಅನ್ನು 10.14ಕ್ಕೆ ತಲುಪಿ 12.30ಕ್ಕೆ ಸುಬ್ರಹ್ಮಣ್ಯ ನಿಲ್ದಾಣ ತಲುಪಲಿದೆ..
ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಸೆಂಟ್ರಲ್ ಕಾಯ್ದಿರಿಸದ ಎಕ್ಸ್ಪ್ರೆಸ್ ರೈಲು (06488) ಮಧ್ಯಾಹ್ನ 1.30ಕ್ಕೆ ಸುಬ್ರಹ್ಮಣ್ಯ ದಿಂದ ಹೊರಟು 3.29ಕ್ಕೆ ಮಂಗಳೂರು ಜಂಕ್ಷನ್ ಹಾಗೂ 4.10ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ. ಈ ರೈಲುಗಳಿಗೆ ಮಂಗಳೂರು ಜಂಕ್ಷನ್, ಬಂಟ್ವಾಳ, ನೇರಳಕಟ್ಟೆ, ಕಬಕ ಪುತ್ತೂರು, ನರಿಮೊಗರು, ಕಾಣಿಯೂರು, ಎಡಮಂಗಲ, ಕೋಡಿಂಬಾಳ ಮತ್ತು ಬಜಕೆರೆ ನಿಲ್ದಾಣದಲ್ಲಿ ನಿಲುಗಡೆ ಇರುತ್ತದೆ.
ರೈಲು ಸಂಖ್ಯೆ 06484 ಕಬಕ ಪುತ್ತೂರು- ಮಂಗಳೂರು ಸೆಂಟ್ರಲ್ ರೈಲು ಕಬಕ ಪುತ್ತೂರಿನಿಂದ ಬೆಳಗ್ಗೆ 7.55ಕ್ಕೆ ಹೊರಟು 9.25ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.
ರೈಲು ಸಂಖ್ಯೆ 06485 ಮಂಗಳೂರು ಸೆಂಟ್ರಲ್-ಕಬಕ ಪುತ್ತೂರು ಪ್ಯಾಸೆಂಜರ್ ರೈಲು ಮಂಗಳೂರು ಸೆಂಟ್ರಲ್ನಿಂದ ಬೆಳಗ್ಗೆ 5.45ಕ್ಕೆ ಹೊರಡಲಿದೆ. 7.15ಕ್ಕೆ ಕಬಕ ಪುತ್ತೂರು ತಲುಪಲಿದೆ ಎಂದು ಪ್ರಕಟಣೆ ತಿಳಿಸಿದೆ.
ಮಂಗಳೂರು ಸೆಂಟ್ರಲ್ – ಕಬಕ ಪುತ್ತೂರು ಪ್ಯಾಸೆಂಜರ್ ರೈಲು ( 06487 ) ಮಂಗಳೂರು ಸೆಂಟ್ರಲ್ನಿಂದ ಸಂಜೆ 6ಗಂಟೆಗೆ ಹೊರಟು ರಾತ್ರಿ 7.25ಕ್ಕೆ ಕಬಕ ಪುತ್ತೂರು ತಲುಪಲಿದೆ.
ರೈಲು ಸಂಖ್ಯೆ 06486 ಕಬಕ ಪುತ್ತೂರು-ಮಂಗಳೂರು ಸೆಂಟ್ರಲ್ ರೈಲು ಕಬಕ ಪುತ್ತೂರು ರೈಲು ನಿಲ್ದಾಣದಿಂದ ರಾತ್ರಿ 8.25ಕ್ಕೆ ಹೊರಟು ರಾತ್ರಿ 10.05ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ.
Discussion about this post