ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಮಂಗಳೂರು ( Mangaluru ) ಪೊಲೀಸ್ ಆಯುಕ್ತರ ಪತ್ರದ ಆಧಾರದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ತಮ್ಮ ಅಧಿಕಾರ ಪ್ರಯೋಗಿಸಿ ಈ ಆದೇಶ ಹೊರಡಿಸಿದ್ದಾರೆ.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ಪರಿಸ್ಥಿತಿ ತಿಳಿಯಾಗದ ಹಿನ್ನಲೆಯಲ್ಲಿ, ಜಿಲ್ಲಾ ವ್ಯಾಪ್ತಿಯಲ್ಲಿ ನಿಷೇದಾಜ್ಞೆಯನ್ನು ಆಗಸ್ಟ್ 6ರ ಮಧ್ಯರಾತ್ರಿ 12 ಗಂಟೆಯ ತನಕ ವಿಸ್ತರಿಸಲಾಗಿದೆ. ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು (Mangaluru) ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರ ಅನ್ವಯ ಆದೇಶವನ್ನು ಹೊರಡಿಸಿದ್ದಾರೆ.

ಇದರೊಂದಿಗೆ ನಗರ ಸ್ಥಳೀಯಾಡಳಿತ ಮತ್ತು ಗ್ರಾಮ ಪಂಚಾಯತ್ ಗಳಿಗೆ ಪ್ರತ್ಯೇಕ ಆದೇಶವೊಂದನ್ನು ಹೊರಡಿಸಿರುವ ಜಿಲ್ಲಾಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವಾಣಿಜ್ಯ ಚಟುವಟಿಕೆಗಳನ್ನು ( ಅಂಗಡಿ, ವ್ಯಾಪಾರ ) ಬೆಳಗ್ಗೆ 6 ರಿಂದ ಸಂಜೆ 6 ರ ತನಕ ಮಾತ್ರ ಕಾರ್ಯಾಚರಿಸಲು ಅವಕಾಶ ನೀಡಬೇಕು ಅಂದಿದ್ದಾರೆ. (Mangaluru) ಸಂಜೆ 6 ಗಂಟೆಯ ಬಳಿಕ ಯಾವುದೇ ವ್ಯವಹಾರಗಳಿಗೆ ಅವಕಾಶ ಇರೋದಿಲ್ಲ. ಆಸ್ಪತ್ರೆ, ಮೆಡಿಕಲ್ ಸೇರಿದಂತೆ ತುರ್ತು ಸೇವೆಗಳಿಗೆ ಈ ನಿರ್ಬಂಧ ಅನ್ವಯವಾಗುವುದಿಲ್ಲ.
ಇದನ್ನೂ ಓದಿ : Bhavana Ramanna : ಬಿಜೆಪಿಗೆ ಹೋಗಿದ್ರಿ..ಮತ್ಯಾಕೆ ಇಲ್ಲಿ ಬಂದ್ರಿ : ಪ್ರತಿಭಟನೆಯಲ್ಲಿ ನಟಿ ಭಾವನಾಗೆ ತರಾಟೆ

ಇನ್ನು ಮಾಲ್‌ಗಳು, ಚಿತ್ರಮಂದಿರಗಳೂ ಬಂದ್ ಆಗಿರಲಿವೆ. ಹೋಟೆಲ್‌ಗಳಿಗೂ ನಿರ್ಬಂಧವಿದ್ದು, ಪಾರ್ಸಲ್‌ಗಳಿಗೆ ಅವಕಾಶ ಇರುತ್ತದೆ. ಸಂಜೆ 6 ಗಂಟೆಯಿಂದ ಸಿನಿಮಾ ಪ್ರದರ್ಶನ, ಮನರಂಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸದಂತೆ ಸೂಚನೆ ನೀಡಲಾಗಿದೆ.

ಸಂಜೆ ಬಳಿಕ ಅಹಿತಕರ ಘಟನೆಗಳು ನಡೆಯುವ ಸಾಧ್ಯತೆ ಹೆಚ್ಚಿರುವುದರಿಂದ ಸಾರ್ವಜನಿಕರ ಅನಗತ್ಯ ಸಂಚಾರವನ್ನು ನಿರ್ಬಂಧಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕ ಸಾರಿಗೆ, ಆಟೋ, ಟ್ಯಾಕ್ಸಿಗಳು, ದೂರದೂರುಗಳಿಗೆ ಸಂಚರಿಸುವವರು ತಮ್ಮಲ್ಲಿರುವ ಟಿಕೆಟ್ ತೋರಿಸಿ ಸಂಚರಿಸಲು ಅವಕಾಶ ನೀಡಲಾಗಿದೆ.

Discussion about this post