Maradi mutt ಸ್ವಾಮೀಜಿ ಸೇರಿದಂತೆ ಕಾರಿನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ
ಬಾಗಲಕೋಟೆ : ಗುಳೇದಗುಡ್ಡ ಪಟ್ಟಣದ ಮರಡಿಮಠದ ಶ್ರೀ ಅಭಿನವ ಕಾಡಸಿದ್ದೇಶ್ವರ ಸ್ವಾಮೀಯವರು (kadasiddeshwar swamiji) ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ತೋಗುಣಸಿ ತಾಂಡಾದ ಬಳಿ ಮಂಗಳವಾರ ಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿದ ಕಾರು ನೀಲಗಿರಿ ಮರಕ್ಕೆ ಡಿಕ್ಕಿಯಾಗಿತ್ತು.
ಇದನ್ನೂ ಓದಿ : Vittal : 6ನೇ ತರಗತಿಯ ಬಾಲಕಿಯ ಪ್ರಾಣ ಕಸಿದ ಜೋಕಾಲಿ
ಅದೃಷ್ಟವಶಾತ್ ಸ್ವಾಮೀಜಿ ( sri abhinava kadasiddeshwar swamiji) ಮತ್ತು ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ಹೊಡೆತಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ವಾಮೀಜಿ ಮತ್ತು ಚಾಲಕ ಸೇರಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗುಳೇದಗುಡ್ಡ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ಸ್ವಾಮೀಜಿ ನಂತರ ಮಠಕ್ಕೆ ಮರಳಿದ್ದಾರೆ.
ಗದಗ ಜಿಲ್ಲೆ ಹಾಲಕೇರಿಯಿಂದ ಗುಳೇದಗುಡ್ಡ ಪಟ್ಟಣಕ್ಕೆ ಕಾರು ಆಗಮಿಸುತ್ತಿತ್ತು.
Discussion about this post