ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ
ಮಲೈ ಮಹದೇಶ್ವರ, ಯಲ್ಲಮ್ಮ ದೇವಸ್ಥಾನಗಳ ಪ್ರಾಧಿಕಾರಗಳಂತೆ ಮೈಸೂರಿನ ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಮುಖಾಂತರ ಬರುವ ಲಕ್ಷಾಂತರ ಭಕ್ತಾದಿಗಳಿಗೆ ಮೂಲ ಸೌಕರ್ಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನ ಚಾಮುಂಡಿಬೆಟ್ಟದ ದಾಸೋಹ ಭವನದಲ್ಲಿಂದು ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ನಡೆಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ವಿಶ್ವ ವಿಖ್ಯಾತ ದಸರಾ ಮಹೋತ್ಸವ ನಡೆಯಲಿದೆ. ಚಾಮುಂಡೇಶ್ವರಿ ಬೆಟ್ಟಕ್ಕೆ ಲಕ್ಷಾಂತರ ಭಕ್ತಾದಿಗಳು ಆಗಮಿಸಲಿದ್ದಾರೆ.
ಶುಕ್ರವಾರ, ಶನಿವಾರ ಹಾಗೂ ಭಾನುವಾರಗಳು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ. ಬರುವ ಭಕ್ತರಿಗೆ ಕುಡಿಯುವ ನೀರು ಹಾಗೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಚಾಮುಂಡಿ ದೇವಾಲಯಕ್ಕೆ 23 ದೇವಾಲಯಗಳು ಸೇರಲಿದೆ, ಆ ದೇವಾಲಯಗಳನ್ನು ಪ್ರಾಧಿಕಾರಿದ ಮೂಲಕ ಅಭಿವೃದ್ಧಿ ಪಡಿಸಲಾಗುವುದು.
ಈಗಾಗಲೇ ಅರ್ಧಕ್ಕೆ ನಿಂತಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ, ಆಧುನಿಕ ವಿದ್ಯುತಿಕರಣಗೊಳಿಸಿ ಕಸ ವಿಲೇವಾರಿ ಮಾಡಲಾಗುವುದು. ಟಾಸ್ಕ್ ಪೋರ್ಸ್ ರಚನೆ ಮಾಡಿ ಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದೆ ಎಂದು ತಿಳಿಸಿದರು.
Chief Minister Siddaramaiah on Tuesday, September 3, said the Sri Chamundeshwari Kshetra Development Authority was constituted to provide better facilities to devotees and added that a master plan focussing on the overall development of Chamundi hills over the next five years would be prepared.
Also, the authority has resolved to make the hills ‘plastic-free’ while banning smoking, consumption of liquor, and tobacco products on the hills, said Mr. Siddaramaiah.