ಪ್ಯಾಟೇ ಹುಡ್ಗೀರ್ ಹಳ್ಳಿ ಲೈಫ್’ ರಿಯಾಲಿಟಿ ಖ್ಯಾತಿಯ ಮೆಬೀನಾ ಮೈಕಲ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ದೇವಿಹಳ್ಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಹೋಗುತ್ತಿದ್ದಾಗ ಟ್ರ್ಯಾಕ್ಟರ್ಗೆ ಡಿಕ್ಕಿಯಾಗಿ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಮೆಬೀನಾ ಅವರು ಪ್ಯಾಟೆ ಹುಡ್ಗೀರು ಹಳ್ಳಿ ಲೈಫ್ ರಿಯಾಲಿಟಿ ಶೋ 4ರ ವಿನ್ನರ್ ಆಗಿದ್ದರು. ಮಾಡೆಲ್ ಆಗಿಯೂ ಮೆಬೀನಾ ಖ್ಯಾತಿ ಗಳಿಸಿದ್ದರು.
ದುರ್ಘಟನೆ ನಡೆದ ಕಾರಿನಲ್ಲಿ ಮೆಬಿನಾ ಸೇರಿ ಮೂವರು ಇದ್ದರು. ಇನ್ನಿಬ್ಬರ ಪರಿಸ್ಥಿತಿ ತುಂಬಾ ಗಂಭೀರವಾಗಿದ್ದು ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ದೇವಿಹಳ್ಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಅಪಘಾತ ಸಂಭವಿಸಿದೆ.
ಕಾರಿನಲ್ಲಿ ಹೋಗುತ್ತಿದ್ದಾಗ ಟ್ರ್ಯಾಕ್ಟರ್ಗೆ ಡಿಕ್ಕಿಯಾಗಿ ದುರ್ಘಟನೆ ನಡೆದಿದೆ.
Discussion about this post