ಬೆಂಗಳೂರು : ಸಚಿವ ಗೋವಿಂದ ಕಾರಜೋಳ ಅವರಿಗೆ ಸೇರಿದ ಸರ್ಕಾರಿ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪ್ರಕರಣ ನೆಲಮಂಗಲ ತಾಲೂಕಿನ ಕುಲುವನಹಳ್ಳಿಯಲ್ಲಿ ನಡೆದಿದೆ. ಸಚಿವರು ತುಮಕೂರು ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಅಪಘಾತ ಈ ಸಂಭವಿಸಿದ್ದು, ಘಟನೆಯಲ್ಲಿ ಬೈಕ್ ಸವಾರನ ಕಾಲು ಮುರಿದಿದೆ.
ಈ ನಡುವೆ ಬೈಕ್ ಸವಾರನ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ನಾನೇ ಭರಿಸುತ್ತೇನೆ ಎಂದು ಸಚಿವರು ಭರವಸೆ ನೀಡಿದ್ದಾರೆ.ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Discussion about this post