ಮಂಗಳೂರು : ಕೊರೋನಾ ಸಂದರ್ಭದಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಜೊತೆ ವಾಗ್ವಾದ ನಡೆಸಿ ಸುದ್ದಿಯಾಗಿದ್ದ ಬಜಪೆ ಕಂದಾವರ ಗ್ರಾಮ ಪಂಚಾಯತ್ ಪಿಡಿಓ ಇದೀಗ ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಹಲ್ಲೆ ನಡೆಸಿದ ಆರೋಪಕ್ಕೆ ಗುರಿಯಾಗಿದ್ದಾರೆ. ಈ ಸಂಬಂಧ ಬಜಪೆ ಠಾಣೆಯಲ್ಲಿ ಪರಸ್ಪರ ದೂರು ದಾಖಲಾಗಿದೆ. ಜೊತೆಗೆ ಇಬ್ಬರೂ ಬೇರೆ ಬೇರೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಗ್ರಾಮ ಪಂಚಾಯತ್ ಅಧ್ಯಕ್ಷ ಉಮೇಶ್ ಮೂಲ್ಯ ಮತ್ತು ಅವರ ಸಂಗಡಿಗರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪಿಡಿಒ ಯಶವಂತ ಬೆಲ್ಚಡ ದೂರು ದಾಖಲಿಸಿದ್ರೆ, ಪಿಡಿಓ ನನ್ನ ಮೇಲೆ ಹಲ್ಲೆ ನಡೆಸಿದ್ದು ಮುಖಕ್ಕೆ ಗಾಯಗಳಾಗಿವೆ ಎಂದು ಇಮೇಶ್ ಮೂಲ್ಯ ದೂರು ದಾಖಲಿಸಿದ್ದಾರೆ.
ಗ್ರಾಮ ಪಂಚಾಯತ್ ಸಾಮಾನ್ಯಸಭೆಯ ನಿರ್ಣಯ ಅನುಷ್ಠಾನ ಕುರಿತಂತೆ ಪರಸ್ಪರ ಜಗಳ ನಡೆದು ಹಲ್ಲೆ ನಡೆದಿದೆ ಎಂದು ಗೊತ್ತಾಗಿದೆ.
ಈ ನಡುವೆ ಪಿಡಿಓ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಗ್ರಾಮ ಪಂಚಾಯತ್ ಎದುರು ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಮತ್ತೊಂದು ಈ ಘಟನೆಯನ್ನು ಖಂಡಿಸಿರುವ ರಾಜ್ಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಮಭಿವೃದ್ಧಿ ಸಂಘ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಂದೆ ಪ್ರತಿಭಟನೆ ನಡೆಸಿ, ಹಲ್ಲೆಕೋರರನ್ನು ಬಂಧಿಸುವಂತೆ ಆಗ್ರಹಿಸಿದೆ.
ಈ ಹಿಂದೆ ಯಶವಂತ ಬೆಲ್ಚಡ ಅವರನ್ನು ವರ್ಗಾವಣೆ ಮಾಡುವ ಬಗ್ಗೆಯೂ ಸಾಕಷ್ಟು ಪ್ರಯತ್ನಗಳನ್ನು ನಡೆದಿತ್ತು ಎನ್ನಲಾಗಿದೆ. ಜೊತೆಗೆ ವಿಕಲಚೇತನರ ಮನೆಗೆ ವಿದ್ಯುತ್ ಸಂಪರ್ಕ ನೀಡುವ ನಿಟ್ಟಿನಲ್ಲಿ ಕಂದಾವರ ಪಿಡಿಓ ವಿಳಂಭ ಧೋರಣೆ ತಳೆದಿದ್ದಾರೆ ಅನ್ನುವ ಆರೋಪವೂ ಕೇಳಿ ಬಂದಿದೆ.
Discussion about this post