ಲಾಲ್ ಬಹದ್ದೂರ್ ಶಾಸ್ತ್ರಿ ರಾಜೀನಾಮೆ ಉದಾಹರಣೆಯೊಂದಿಗೆ ಸಿದ್ದರಾಮಯ್ಯಗೆ ಮಹತ್ವದ ಸಲಹೆ
ಪ್ರಜಾಪ್ರಭುತ್ವದಲ್ಲಿ ಹಣಕ್ಕಾಗಿ ಯಾರೂ ರಾಜಕೀಯಕ್ಕೆ ಬರಬಾರದು ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟಿದ್ದಾರೆ.
ಮಂಗಳೂರು ವಿಶ್ವವಿದ್ಯಾಲಯದ ೪೫ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಹಣದ ದುರಾಸೆಯಿಂದ ಯಾವ ಚುನಾವಣೆಗೂ ಸ್ಪರ್ಧಿಸಬಾರದು, ಬದಲು ಪ್ರಾಮಾಣಿಕವಾಗಿ ಜನರ ಸೇವೆ ನಡೆಸುವುದಿದ್ದರೆ ರಾಜಕೀಯಕ್ಕೆ ಬನ್ನಿ ಎಂದು ಕರೆ ನೀಡಿದರು.
ಸದನದಲ್ಲಿ ಆಡಳಿತ-ವಿಪಕ್ಷಗಳ ವಿಚಾರದಲ್ಲಿ ಸಭಾತ್ಯಾಗ ನಡೆದಾಗಲೇ ಪ್ರಮುಖ ಮಸೂದೆಗಳು ಚರ್ಚೆ ಇಲ್ಲದೆಯೇ ಅಂಗೀಕಾರಗೊಳ್ಳುತ್ತವೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಇದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಸಂತೋಷ್ ಹೆಗ್ಡೆಯವರು, ಲಾಲ್ ಬಹದ್ದೂರ್ ಶಾಸ್ತ್ರಿ ರಾಜೀನಾಮೆ ಉದಾಹರಣೆಯೊಂದಿಗೆ ಸಿದ್ದರಾಮಯ್ಯಗೆ ಮಹತ್ವದ ಸಲಹೆ ನೀಡಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಈ ಹಿಂದೆ ರೈಲ್ವೆ ಸಚಿವರಾಗಿದ್ದಾಗ ಲಾಲ್ ಬಹದ್ದೂರ್ ಶಾಸ್ತ್ರಿ ರೈಲು ಅಪಘಾತ ಸಂಭವಿಸಿದ್ದಕ್ಕೆ ಅದರ ಹೊಣೆಹೊತ್ತು ರಾಜೀನಾಮೆ ನೀಡಿದ್ದರು.
ಇನ್ನು ರಾಜೀನಾಮೆ ಕೊಡುವುದು, ಬಿಡುವುದು ಸಿದ್ದರಾಮಯ್ಯಗೆ ಬಿಟ್ಟಿದ್ದು. ಇಂತಹ ಗಂಭೀರ ಆರೋಪ ಕೇಳಿಬಂದಾಗ ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಡಲೇಬೇಕು ಎಂಬ ಕಾನೂನಿಲ್ಲ. ಆದರೆ ಸಾರ್ವಜನಿಕರ ದೃಷ್ಟಿಯಲ್ಲಿ ನನಗೆ ಅನಿಸಿದಾಗ ರಾಜೀನಾಮೆ ಕೊಡಬೇಕು ಎಂದು ಹೇಳಿದ್ದಾರೆ.
Former Lokayukta Justice Santosh Hegde opined that Chief Minister Siddaramaiah should resign in connection with the allegations of his involvement in the Mysuru Urban Development Authority (MUDA) scam