ಮುಂಬೈ : ದೆಹಲಿಯ ನಿರ್ಭಯಾ ಪ್ರಕರಣವನ್ನು ನೆನಪಿಸುವ ಘಟನೆಯೊಂದು ವಾಣಿಜ್ಯ ನಗರಿ ಮುಂಬೈನಲ್ಲಿ ನಡೆದಿದೆ. ಮಧ್ಯವಯಸ್ಕ ಮಹಿಳೆಯೊಬ್ಬರನ್ನು ಟೆಂಪೊದೊಳಗೆ ಅತ್ಯಾಚಾರ ನಡೆಸಿ ಖಾಸಗಿ ಭಾಗಕ್ಕೆ ಕಬ್ಬಿಣದ ರಾಡ್ ತುರುಕಿದ ಘಟನೆ ಬೆಳಕಿಗೆ ಬಂದಿದೆ.
ಇದೀಗ ಮಹಿಳೆ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಘಟನೆ ಸಂಬಂಧ ಒಬ್ಬನನ್ನು ಬಂಧಿಸಲಾಗಿದೆ.
ಕೈರಾನಿ ರಸ್ತೆಯಲ್ಲಿ ಮಹಿಳೆಯೊಬ್ಬರಿಗೆ ವ್ಯಕ್ತಿಯೊಬ್ಬ ಹಲ್ಲೆ ನಡೆಸುತ್ತಿದ್ದಾನೆ ಅನ್ನುವ ಅಪರಿಚಿತ ಕರೆಯ ಹಿನ್ನಲೆಯಲ್ಲಿ ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮಹಿಳೆ ರಕ್ತಸ್ರಾವದಿಂದ ಚಿಂತಾಜನಕ ಸ್ಥಿತಿಯಲ್ಲಿದ್ದರು.
Discussion about this post