ಮೈಸೂರು : ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗುತ್ತೇನೆ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಘೋಷಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿರುವ ಅವರು ನಾನು ಆತ್ಮತೃಪ್ತಿಯಿಂದ ನಿವೃತ್ತಿಯಾಗುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
4 ವರ್ಷದ ಹಿಂದೆಯೇ ನಾನು ನಿವೃತ್ತಿಯಾಗಲು ಬಯಸಿದ್ದೆ. ಆದರೆ ಬದಲಾದ ರಾಜಕೀಯದ ಕಾರಣ ಮತ್ತೆ ಚುನಾವಣೆಗೆ ಸ್ಪರ್ಧಿಸಿದೆ. ಹಾಗಂತ ಮುಂದಿನ ಚುನಾವಣೆಗಳಿಗೆ ನಾನು ಸ್ಪರ್ಧಿಸುವುದಿಲ್ಲ ಎಂದು ಹೇಳಿರುವ ಶ್ರೀನಿವಾಸ ಪ್ರಸಾದ್, 50 ವರ್ಷದ ನನ್ನ ರಾಜಕೀಯ ಜೀವನದ ಪುಸ್ತಕವೊಂದು ಬಿಡುಗಡೆಯಾಗಲಿದ್ದು. ನನ್ನ ರಾಜಕೀಯ ಜೀವನದ ಎಲ್ಲ ಏಳು ಬೀಳುಗಳನ್ನು ದಾಖಲಿಸಿದ್ದೇನೆ ಅಂದಿದ್ದಾರೆ.
Discussion about this post