ಮೈಸೂರು : ಕೊರೋನಾ ಸೋಂಕಿನ ಎರಡನೆ ಅಲೆ ಹೆಚ್ಚಾಗತೊಡಗಿದೆ. ಅದರಲ್ಲೂ ಬೆಂಗಳೂರು ಬಿಟ್ಟರೆ ಮೈಸೂರು ಜಿಲ್ಲೆಯಲ್ಲಿ ಕೊರೋನಾ ವೇಗವಾಗಿ ಹರಡುತ್ತಿದೆ. ಮುನ್ನೆಚ್ಚರಿಕೆ ಕೈಗೊಳ್ಳಿ ಎಂದು ಜಿಲ್ಲಾಡಳಿತ ಅದೆಷ್ಟು ಮನವಿ ಮಾಡಿದರೂ ಜನ ಮಾತ್ರ ಕ್ಯಾರೇ ಅನ್ನುತ್ತಿಲ್ಲ.
ಈ ನಡುವೆ ಮೈಸೂರು ಮಹಾನಗರಪಾಲಿಕೆ ಮೇಯರ್ ರುಕ್ಮಿಣಿ ಮಾದೇಗೌಡ ಅವರು ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರ ಬೆನ್ನಲ್ಲೇ ಪಾಲಿಕೆಯ ಹಲವು ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ಲಭ್ಯ ಮಾಹಿತಿಗಳ ಪ್ರಕಾರ ಮೇಯರ್ ರುಕ್ಮಿಣಿ ಮಾದೇಗೌಡರ ಆಪ್ತ ಸಹಾಯಕ ಸೇರಿ ಪಾಲಿಕೆಯ ಒಟ್ಟು 8 ಮಂದಿ ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿದೆ. ಇದೀಗ ಮಹಾನಗರ ಪಾಲಿಕೆ ಕಚೇರಿಗಳನ್ನು ಸ್ಯಾನಿಟೈಸ್ ಮಾಡಲಾಗಿದ್ದು, ಪಾಲಿಕೆಯ ಎಲ್ಲಾ ಸದಸ್ಯರು ಹಾಗೂ ಎಲ್ಲಾ ಸಿಬ್ಬಂದಿಯನ್ನು ಕೊರೋನಾ ತಪಾಸಣೆಗೆ ಒಳಪಡಿಸಲು ನಿರ್ಧರಿಸಲಾಗಿದೆ.
Discussion about this post