ಮೈಸೂರು : ಸಾಂಸ್ಕೃತಿಕ ನಗರಿಯಲ್ಲಿ ಕೊರೋನಾ ಅಬ್ಬರ ತೀವ್ರಗೊಂಡಿದೆ. ಈ ನಡುವೆ ಮೈಸೂರಿನಲ್ಲಿ ಯುವಕರೇ ಹೆಚ್ಚಾಗಿ ಕೊರೋನಾ ಸೋಂಕಿಗೆ ತುತ್ತಾಗುತ್ತಿರುವುದು ಜಿಲ್ಲಾಡಳಿತಕ್ಕೆ ತಲೆ ನೋವಾಗಿ ಪರಿಣಮಿಸಿದೆ. ಅದರಲ್ಲೂ ನಗರ ಪ್ರದೇಶದಲ್ಲೇ ಸೋಂಕಿತರು ಪತ್ತೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಈ ಬಗ್ಗೆ ಮಾತನಾಡಿರುವ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಏರುತ್ತಿದೆ. ಸೋಂಕಿತರ ದ್ವೀತಿಯ ಸಂಪರ್ಕಿತರು ಪರೀಕ್ಷೆ ಮಾಡಿಸಿಕೊಳ್ಳಲು ಬರುತ್ತಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ಸೋಂಕು ಹೆಚ್ಚಾಗಿದೆ ಅಂದಿದ್ದಾರೆ.
ಈ ನಡುವೆ ಸೋಂಕು ತಡೆಗಟ್ಟುವ ಕುರಿತಂತೆ ಮಾತನಾಡಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಮರ್ ನಾಥ್, ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ಪ್ರತೀ ನಿತ್ಯ 6 ಸಾವಿರ ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಹೀಗಾಗಿ ಸಿಬ್ಬಂದಿ ಮೇಲೆ ಸಹಜವಾಗಿಯೇ ಒತ್ತಡ ಹೆಚ್ಚಾಗಿದೆ. ಹಾಗಿದ್ದರೂ ಎಪ್ರಿಲ್ 30ರವರೆಗೆ ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿಗಳ ರಜೆಯನ್ನು ರದ್ದುಗೊಳಿಸಲಾಗಿದೆ.ಮಾತ್ರವಲ್ಲದೆ ಆರೋಗ್ಯ ಇಲಾಖೆ ಸಿಬ್ಬಂದಿಯ ಊಟದ ವಿರಾಮಕ್ಕೂ ಬ್ರೇಕ್ ಹಾಕಲಾಗಿದೆ ಅಂದಿದ್ದಾರೆ.
Discussion about this post