Sunday, April 18, 2021

ಕೊರೋನಾ ಸೋಲಿಸುವ ಸಲುವಾಗಿ ಊಟದ ವಿರಾಮಕ್ಕೂ ಕತ್ತರಿ…!

Must read

- Advertisement -
- Advertisement -

ಮೈಸೂರು : ಸಾಂಸ್ಕೃತಿಕ ನಗರಿಯಲ್ಲಿ ಕೊರೋನಾ ಅಬ್ಬರ ತೀವ್ರಗೊಂಡಿದೆ. ಈ ನಡುವೆ ಮೈಸೂರಿನಲ್ಲಿ ಯುವಕರೇ ಹೆಚ್ಚಾಗಿ ಕೊರೋನಾ ಸೋಂಕಿಗೆ ತುತ್ತಾಗುತ್ತಿರುವುದು ಜಿಲ್ಲಾಡಳಿತಕ್ಕೆ ತಲೆ ನೋವಾಗಿ ಪರಿಣಮಿಸಿದೆ. ಅದರಲ್ಲೂ ನಗರ ಪ್ರದೇಶದಲ್ಲೇ ಸೋಂಕಿತರು ಪತ್ತೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಈ ಬಗ್ಗೆ ಮಾತನಾಡಿರುವ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಏರುತ್ತಿದೆ. ಸೋಂಕಿತರ ದ್ವೀತಿಯ ಸಂಪರ್ಕಿತರು ಪರೀಕ್ಷೆ ಮಾಡಿಸಿಕೊಳ್ಳಲು ಬರುತ್ತಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ಸೋಂಕು ಹೆಚ್ಚಾಗಿದೆ ಅಂದಿದ್ದಾರೆ.

ಈ ನಡುವೆ ಸೋಂಕು ತಡೆಗಟ್ಟುವ ಕುರಿತಂತೆ ಮಾತನಾಡಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಮರ್ ನಾಥ್, ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ಪ್ರತೀ ನಿತ್ಯ 6 ಸಾವಿರ ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಹೀಗಾಗಿ ಸಿಬ್ಬಂದಿ ಮೇಲೆ ಸಹಜವಾಗಿಯೇ ಒತ್ತಡ ಹೆಚ್ಚಾಗಿದೆ. ಹಾಗಿದ್ದರೂ ಎಪ್ರಿಲ್ 30ರವರೆಗೆ  ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿಗಳ ರಜೆಯನ್ನು ರದ್ದುಗೊಳಿಸಲಾಗಿದೆ.ಮಾತ್ರವಲ್ಲದೆ ಆರೋಗ್ಯ ಇಲಾಖೆ ಸಿಬ್ಬಂದಿಯ ಊಟದ ವಿರಾಮಕ್ಕೂ ಬ್ರೇಕ್ ಹಾಕಲಾಗಿದೆ ಅಂದಿದ್ದಾರೆ.

- Advertisement -
- Advertisement -
- Advertisement -

Latest article