ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ದಸರಾ ಆಚರಣೆ ಕುರಿತಂತೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಸರಳವಾಗಿ ದಸರಾ ಆಚರಣೆ ಸೂಚನೆ ನೀಡಲಾಗಿದೆ. ಈಗ ಹೊರಡಿಸಿರುವ ಮಾರ್ಗಸೂಚಿ ಮೈಸೂರು ದಸರಾ ಮಾತ್ರವಲ್ಲದೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಆಚರಿಸುವ ದಸರಾ ಹಬ್ಬಗೂ ಅನ್ವಯವಾಗಲಿದೆ. ಆದರೆ ಮೈಸೂರು ದಸರಾಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ಮಾರ್ಗಸೂಚಿಯ ಪ್ರಕಾರ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ 400ಕ್ಕೂ ಹೆಚ್ಚು ಜನರು ಸೇರುವಂತಿಲ್ಲ. ದೈಹಿಕ ಅಂತರ ಇಲ್ಲದೆ ಕಾರ್ಯಕ್ರಮ ನಡೆಸುವಂತಿಲ್ಲ. ಈ ಎಲ್ಲಾ ಮಾರ್ಗಸೂಚಿಗಳನ್ನು ಜಾರಿಗೊಳಿಸುವ ಹೊಣೆಯನ್ನು ಮಹಾನಗರ ಪಾಲಿಕೆಗಳ ಆಯುಕ್ತರು, ನಗರ ಪೊಲೀಸ್ ಆಯುಕ್ತರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ.
ಮೈಸೂರು ದಸರಾ ಆಚರಣೆಗೆ ಸಂಬಂಧಿಸಿದ ಮಾರ್ಗಸೂಚಿ ಪ್ರಕಾರ
- ಅರಮನೆ ಆವರಣದಲ್ಲಿ ದಸರಾ ಆಚರಣೆ ಮಾಡಬೇಕು
- ಈ ವೇಳೆ ಮಾಸ್ಕ್, ಸ್ಯಾನಿಟೈಸ್ನ ಕಡ್ಡಾಯ
- ಜಂಭೂಸವಾರಿಯನ್ನು ವರ್ಚುವಲ್ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಬೇಕು.
- ಚಾಮುಂಡಿ ಬೆಟ್ಟದಲ್ಲಿ ನಡೆಯುವ ದಸರಾ ಉದ್ಘಾಟನಾ ಸಮಾರಂಭಕ್ಕೆ ಕೇವಲ 100 ಜನರಿಗೆ ಮಾತ್ರ ಅವಕಾಶ
- ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ 500 ಜನರಿಗೆ ಅವಕಾಶ
- ಜಂಬೂಸವಾರಿ, ಪಂಜಿನ ಕವಾಯತಿಗೆ 500 ಜನರಿಗೆ ಮಾತ್ರ ಅವಕಾಶ
Discussion about this post