ರಾಜವಂಶಸ್ಥೆ ಪ್ರಮೋದ ದೇವಿ ಒಡೆಯರ್ ಅವರಿಂದಲೇ ಆಯ್ಕೆ
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅಂಬಾವಿಲಾಸ ಅರಮನೆಗೆ ಆಗಮಿಸಿರುವ ೧೪ ಆನೆಗಳ ಪೈಕಿ ಅರಮನೆಯ ಖಾಸಗಿ ದರ್ಬಾರ್ ಗೆ ಪಟ್ಟದ ಆನೆ ಹಾಗೂ ನಿಶಾನೆ ಆಯ್ಕೆ ಅಂತಿಮವಾಗಿದೆ ಎಂದು ಡಿಸಿಎಫ್ ಡಾ ಪ್ರಭುಗೌಡ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ರಾಜವಂಶಸ್ಥೆ ಪ್ರಮೋದ ದೇವಿ ಒಡೆಯರ್ ಅವರು ಅರಮನೆಯ ಖಾಸಗಿ ದರ್ಬಾರ್ ಗೆ ಪಟ್ಟದ ಆನೆಯಾಗಿ ಕಂಜನ್ ಆನೆ ಹಾಗೂ ನಿಶಾನೆ ಆನೆಯಾಗಿ ಭೀಮ ಆನೆಯನ್ನು ಆಯ್ಕೆಮಾಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಜಂಬೂಸವಾರಿ ತೆರಳುವ ಮಾರ್ಗದಲ್ಲಿ ಪ್ರತಿನಿತ್ಯ ಬೆಳಗ್ಗೆ ಹಾಗೂ ಸಂಜೆ ವೇಳೆಯಲ್ಲಿ ಅನೆಗಳು ಉತ್ತಮವಾಗಿ ತಾಲಿಮು ನಡೆಸಿದ್ದು, ಮುಂದಿನ ದಿನಗಳಲ್ಲಿ ಜವಾಬ್ದಾರಿ ನೀಡಲಾಗುವುದು ಎಂದು ಹೇಳಿದ್ದಾರೆ.