ಮೈಸೂರು : ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಈ ಪ್ರಕರಣದಲ್ಲಿ 6 ಮಂದಿ ಆರೋಪಿಗಳಿದ್ದು, ಈ ಪೈಕಿ 5 ಮಂದಿಯನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ ಅನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಬಂಧಿತರ ಪೈಕಿ ಯಾರೊಬ್ಬರೂ ವಿದ್ಯಾರ್ಥಿಗಳಲ್ಲ ಎಂದು ಗೊತ್ತಾಗಿದೆ.
ಈ ನಡುವೆ ಪೊಲೀಸರ ಕಾರ್ಯಾಚರಣೆ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಪೊಲೀಸರ ಕಾರ್ಯಾಚರಣೆ ಯಶಸ್ವಿಯಾಗಿದೆ. ಮಧ್ಯಾಹ್ನ 2 ಗಂಟೆ ಹೊತ್ತಿಗೆ ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ ಅಂದಿದ್ದಾರೆ. ಈಗಾಗಲೇ ಪ್ರಕರಣ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗರಂ ಆಗಿದ್ದು, ಪೊಲೀಸ್ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೊತೆಗೆ ಇಡೀ ಇಲಾಖೆಗೆ ಮೇಜರ್ ಸರ್ಜರಿಯ ಮುನ್ಸೂಚನೆಯನ್ನು ಕೂಡಾ ಕೊಟ್ಟಿದ್ದಾರೆ.
Discussion about this post