Saturday, March 6, 2021

ಲಸಿಕೆ ಪಡೆಯದ ಕಾರ್ಯಕರ್ತರಿಗೆ ಕೊರೋನಾ ಸೋಂಕು ಬಂದ್ರೆ ಸಂಕಷ್ಟ ಗ್ಯಾರಂಟಿ…

Must read

- Advertisement -
- Advertisement -

ಬೆಂಗಳೂರು : ಈಗಾಗಲೇ ಕೊರೋನಾ ಸೋಂಕು ದೃಢಪಟ್ಟ ಎಲ್ಲರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುತ್ತಿದೆ. ಮಾತ್ರವಲ್ಲದೆ ಆರೋಗ್ಯ ಕಾರ್ಯಕರ್ತರಿಗೆ ಹಾಗೂ ಕೊರೋನಾ ವಾರಿಯರ್ಸ್ ಗಳಿಗೆ ಕೊರೋನಾ ಲಸಿಕೆಯನ್ನು ಉಚಿತವಾಗಿ ಹಂಚಲಾಗುತ್ತಿದೆ.

ಈ ನಡುವೆ ಕೊರೋನಾ ಲಸಿಕೆ ಪಡೆಯಲು ಆರೋಗ್ಯ ಕಾರ್ಯಕರ್ತರು ಹಾಗೂ ಕೊರೋನಾ ವಾರಿಯರ್ಸ್ ಹಿಂದೇಟು ಹಾಕುತ್ತಿದ್ದಾರೆ.

ಈ ಹಿನ್ನಲೆಯಲ್ಲಿ ಎಲ್ಲರಿಗೂ ಲಸಿಕೆ ತಲುಪಿಸುವ ನಿಟ್ಟಿನಲ್ಲಿ ಬಿಬಿಎಂಪಿ ಕಠಿಣ ಕ್ರಮಕ್ಕೆ ಮುಂದಾಗಿದೆ.

ಉಚಿತ ಲಸಿಕೆ ವಿತರಣೆಯಾಗುತ್ತಿದ್ದರೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿರುವುದನ್ನು ಗಮನಿಸಿರುವ ಪಾಲಿಕೆ ಲಸಿಕೆ ಪಡೆದ ಆರೋಗ್ಯ ಕಾರ್ಯಕರ್ತರು ಹಾಗೂ ಕೊರೋನಾ ವಾರಿಯರ್ಸ್ ಗಳಿಗೆ ಮುಂದಿನ ದಿನಗಳಲ್ಲಿ ಕೊರೋನಾ ದೃಢಪಟ್ಟರೆ ಉಚಿತ ಚಿಕಿತ್ಸೆ ನೀಡದಿರಲು ನಿರ್ಧರಿಸಿದೆ.

ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸುವುದಾಗಿ ಹೇಳಿರುವ ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ ಪ್ರಸಾದ್ ಉಚಿತವಾಗಿ ಲಸಿಕೆ ನೀಡಿದರೂ ಕೆಲವರು ಮಾತ್ರ ಪಡೆಯುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 4,01,775ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಪ್ರಸ್ತುತ 3,957 ಸಕ್ರಿಯ ಪ್ರಕರಣಗಳಿದ್ದು ಈ ಪೈಕಿ 65 ಮಂದಿ ಸ್ಥಿತಿ ಗಂಭೀರವಾಗಿದೆ.

- Advertisement -
- Advertisement -
- Advertisement -

Latest article