ಸಿಐಡಿ ತನಿಖೆ ನಡೆಸುವ ಬಗ್ಗೆ ಚಿಂತನೆ ಅಂದ ಚಲುವರಾಯಸ್ವಾಮಿ
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ಕಾನೂನು ಸುವ್ಯವಸ್ಥೆ ವಿಫಲವಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ, ಶಾಸಕ ಡಾ. ಅಶ್ವತ್ಥನಾರಾಯಣ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಗಮಂಗಲ ಘಟನೆಯನ್ನು ಎನ್ಐಎ ತನಿಖೆಗೆ ನೀಡುವಂತೆ ಆಗ್ರಹಿಸಿದ್ದಾರೆ.
ಬಂಧಿತ ಕೇರಳ ಮೂಲದವರಿಗೆ ನಾಗಮಂಗಲದಲ್ಲಿ ಏನು ಕೆಲಸ ಎಂದು ಪ್ರಶ್ನಿಸಿದ್ದಾರೆ. ನಾಳೆ ನಾಗಮಂಗಲಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ ತೆರಳಲಿದ್ದು, ಮಾಹಿತಿ ಕಲೆ ಹಾಕಲಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಶಾಸಕ ಮುನಿರತ್ನ ಬಂಧನ ವಿಚಾರ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಯಾರೇ ತಪ್ಪು ಮಾಡಿದ್ದರೂ ಶಿಕ್ಷೆಯಾಗಬೇಕು ಎಂದು ತಿಳಿಸಿದ್ದಾರೆ.
ಈ ನಡುವೆ ಮಂಡ್ಯ ಜಿಲ್ಲೆಯ ನಾಗಮಂಗಲ ಹಿಂಸಾಚಾರ ಕುರಿತಂತೆ ಸಿಐಡಿ ತನಿಖೆ ನಡೆಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ, ತಿಳಿಸಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಲಭೆ ಕುರಿತಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ಜನರು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.
ನಾಗಮಂಗಲದ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಕೆಲ ಕೇರಳದ ಯುವಕರನ್ನು ಗಲಭೆಯಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದು ಅವರು ಸ್ಪಷ್ಪಪಡಿಸಿದ್ದಾರೆ.