ಈ ಹಿಂದೆ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ರಾಜ್ಯದಲ್ಲಿ ಗೋಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲಾಗಿದೆ.
ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿರುವ ಕುರಿತಂತೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ತಾವು ಅಧಿಕಾರಕ್ಕೆ ಬಂದರೆ ಕಾಯ್ದೆ ರದ್ದುಗೊಳಿಸಿರುವುದಾಗಿ ಸಿದ್ದರಾಮಯ್ಯ ಹೇಳಿರುವುದು ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ.
ಸಿದ್ದರಾಮಯ್ಯ ಅವರ ನಡೆ ಕುರಿತಂತೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಸಿದ್ದರಾಮಯ್ಯನವರು ಸಗಣಿ ಎತ್ತಿದ್ದೇನೆ ಎಂದು ಪದೇ ಪದೇ ಹೇಳುತ್ತಿದ್ದಾರೆ. ಆದರೆ ಸಗಣಿ ಎತ್ತಿ ನಾಟಕ ಮಾಡುವುದರಲ್ಲಿ ಅರ್ಥವಿಲ್ಲ. ಗೋ ಆರಾಧನೆ ಮಾಡಬೇಕು ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ಗೋ ಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿರುವ ಹಿನ್ನಲೆಯಲ್ಲಿ ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲಿ ಗೋ ಪೂಜೆ ನೆರವೇರಿಸಿ ಮಾತನಾಡಿದ ಅವರು ಈ ಹಿಂದೆ ತಲ್ವಾರ್ ಹಿಡಿದು ಗೋ ಕಳ್ಳತನ ಮಾಡಿದವರನ್ನು ಕಾಂಗ್ರೆಸ್ ಬಂಧಿಸುವ ಗೋಜಿಗೆ ಹೋಗಿರಲಿಲ್ಲ. ಹೀಗಾಗಿ ಸಿದ್ದರಾಮಯ್ಯನವರು ಗೋ ಹತ್ಯೆ ನಿಷೇಧದ ಪರವಾಗಿರಲು ಸಾಧ್ಯವೇ ಇಲ್ಲ ಅಂದಿದ್ದಾರೆ.