ನೀಟ್ ಪರೀಕ್ಷೆಗಳು ಸೆಪ್ಟೆಂಬರ್ 12ರಂದು ನಡೆಯಲಿದ್ದು, ಈಗಾಗಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಪರೀಕ್ಷಾ ದಿನಾಂಕವನ್ನು ಘೋಷಣೆ ಮಾಡಿದ್ದಾರೆ. ಇದರ ಮುಂದುವರಿದ ಭಾಗವಾಗಿ ನೀಟ್ 2021 ಪರೀಕ್ಷೆಯ ನೋಂದಣಿ ಪ್ರಕ್ರಿಯೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಇಂದಿನಿಂದ ಪ್ರಾರಂಭಿಸುತ್ತಿದೆ.
ಪರೀಕ್ಷೆ ಬರೆಯಲು ಬಯಸುವ ಅಭ್ಯರ್ಥಿಗಳು NTA ಅಧಿಕೃತ ವೆಬ್ಸೈಟ್ನಲ್ಲಿ ಸಂಜೆ 5 ಗಂಟೆಯಿಂದಲೇ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ntaneet.nic.in ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ.
ಈ ಬಾರಿ 198 ನಗರಗಳಲ್ಲಿ ಪರೀಕ್ಷೆ ಯನ್ನುನಡೆಸಲಾಗುತ್ತಿದ್ದು ಕೊರೊನಾ ವೈರಸ್ ಸೋಂಕಿನ ಮುನ್ನೆಚ್ಚರಿಕಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ.
Discussion about this post