ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ ಮಾಡಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ. ಕರ್ನಾಟಕದ 35ನೇ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಅವರನ್ನು ನೇಮಕ ಮಾಡಲಾಗಿದೆ.
ಇನ್ನುಳಿದಂತೆ ಹಿಮಾಚಲ ಪ್ರದೇಶ ಬಿಜೆಪಿ ಉಸ್ತುವಾರಿಯಾಗಿದ್ದ ಬಂಡಾರು ದತ್ತಾತ್ರೇಯ ಅವರನ್ನು ಹರಿಯಾಣ ರಾಜ್ಯಪಾಲರಾಗಿ, ಆಂಧ್ರ ಪ್ರದೇಶದ ಬಿಜೆಪಿ ಮುಖಂಡ ಹರಿಬಾಬು ಕಂಭಂಪತಿ ಅವರನ್ನು ಮಿಝೋರಾಂ ರಾಜ್ಯಪಾಲರಾಗಿ, ಗುಜರಾತ್ ಬಿಜೆಪಿ ಮುಖಂಡ ಮಂಗುಭಾಯ್ ಚಗನ್ಭಾಯ್ ಪಟೇಲ್ ಅವರನ್ನು ಮಧ್ಯಪ್ರದೇಶ ರಾಜ್ಯಪಾಲರಾಗಿ, ಗೋವಾ ಸರ್ಕಾರದಲ್ಲಿ ಅರಣ್ಯ ಹಾಗೂ ಪರಿಸರ ಸಚಿವರಾಗಿರುವ ರಾಜೇಂದ್ರನ್ ವಿಶ್ವನಾಥ್ ಅರ್ಲೇಕರ್ ಅವರನ್ನು ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ನೇಮಕಮಾಡಲಾಗಿದೆ.
ಇನ್ನಿದಂತೆ ಮಿಜೋರಾಂ ರಾಜ್ಯಪಾಲರಾಗಿದ್ದ ಪಿ ಎಸ್ ಶ್ರೀಧರನ್ ಪಿಳ್ಳೈ ಅವರನ್ನು ಗೋವಾ ರಾಜ್ಯಪಾಲರಾಗಿ ವರ್ಗಾವಣೆ ಮಾಡಲಾಗಿದೆ. ಹರಿಯಾಣ ರಾಜ್ಯಪಾಲರಾಗಿದ್ದ ಬಿಹಾರದ ಬಿಜೆಪಿ ಮುಖಂಡ ಸತ್ಯದೇವ್ ನಾರಾಯಣ್ ಆರ್ಯ ಅವರನ್ನು ತ್ರಿಪುರಾ ರಾಜ್ಯಪಾರಾಗಿ ವರ್ಗಾಯಿಸಲಾಗಿದೆ. ತ್ರಿಪುರಾ ರಾಜ್ಯಪಾಲರಾಗಿದ್ದ ರಮೇಶ್ ಬಾಯಿಸ್ ಅವರನ್ನು ಜಾರ್ಖಂಡ್ ರಾಜ್ಯಪಾಲರಾಗಿ ವರ್ಗಾವಣೆ ಮಾಜಲಾಗಿದೆ. ಬಾಯಿಸ್ ಅವರು ವಾಜಪೇಯಿ ಸರ್ಕಾರದಲ್ಲಿ ಮಂತ್ರಿಗಳಾಗಿ ಕೆಲಸ ಮಾಡಿದ್ದರು.
ಇನ್ನು ಕರ್ನಾಟಕದ ರಾಜ್ಯಪಾಲರಾಗಿ ನೇಮಕವಾಗಿರುವ ಥಾವರ್ ಚಂದ್ ಗೆಹ್ಲೋಟ್ ಕೇಂದ್ರ ಸಂಪುಟದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರಾಗಿದ್ದಾರೆ.

ಮಧ್ಯಪ್ರದೇಶ ರಾಜ್ಯದ ನಾಗ್ಡಾ ಜಿಲ್ಲೆಯಲ್ಲಿ ಜನಿಸಿದ ಥಾವರ್ ಚಂದ್ ಗೆಹ್ಲೋಟ್ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದು, ಈ ಹಿಂದೆ ಕರ್ನಾಟಕ ಬಿಜೆಪಿ ಉಸ್ತುವಾರಿಯಾಗಿಯೂ ಅವರು ಕೆಲಸ ಮಾಡಿದ್ದರು.
Discussion about this post