ಕರ್ನಾಟಕಕ್ಕೆ ನೂತನ ರಾಜ್ಯಪಾಲರ ನೇಮಕವಾಗಿದೆ. ಕರ್ನಾಟಕದ 35ನೇ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಅವರ ನೇಮಕಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ.
ರಾಜ್ಯಸಭಾ ಸದಸ್ಯರಾಗಿರುವ 73 ವರ್ಷದ ಥಾವರ್ ಚಂದ್ ಗೆಹ್ಲೋಟ್ ಕೇಂದ್ರ ಸಂಪುಟದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರಾಗಿದ್ದಾರೆ.
ಮಧ್ಯಪ್ರದೇಶ ರಾಜ್ಯದ ನಾಗ್ಡಾ ಜಿಲ್ಲೆಯಲ್ಲಿ ಜನಿಸಿದ ಥಾವರ್ ಚಂದ್ ಗೆಹ್ಲೋಟ್ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದು, ಈ ಹಿಂದೆ ಕರ್ನಾಟಕ ಬಿಜೆಪಿ ಉಸ್ತುವಾರಿಯಾಗಿಯೂ ಅವರು ಕೆಲಸ ಮಾಡಿದ್ದರು.
2014 ಸಪ್ಟಂಬರ್ 1 ರಂದು ಗುಜರಾತ್ ಮೂಲದ ವಜುಭಾಯಿ ವಾಲಾ ಕರ್ನಾಟಕದ ರಾಜ್ಯಪಾಲರಾಗಿ ನೇಮಕಗೊಂಡಿದ್ದರು. 2019ರ ಸೆಪ್ಟೆಂಬರ್ನಲ್ಲಿಯೇ ವಜುಭಾಯಿ ವಾಲಾ ಅವರ ಅವಧಿ ಪೂರ್ಣಗೊಂಡಿತ್ತು.
Discussion about this post