State Bank of India ಖಾಲಿ ಇರುವ 8 ಸಾವಿರಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ( State Bank of India ) ಖಾಲಿ ಇರುವ ಕ್ಲರ್ಕ್ ಹುದ್ದೆಗಳ ( SBI Clerk Exam ) ಭರ್ತಿ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಸಂಬಂಧ ಈಗಾಗಲೇ ಅಧಿಸೂಚನೆ ಹೊರ ಬಿದ್ದಿದ್ದು, ನವೆಂಬರ್ 17 ರಿಂದ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಎಸ್ಬಿಐನ ಅಧಿಕೃತ ವೆಬ್ಸೈಟ್ sbi.co.in ಮೂಲಕ ಆನ್ಲೈನ್ನಲ್ಲೇ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು
ಅರ್ಜಿ ಹಾಕಲು ಪ್ರಾರಂಭ ದಿನಾಂಕ: ನವೆಂಬರ್ 17, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 7, 2023
ಪೂರ್ವಭಾವಿ ಪರೀಕ್ಷೆ: ಜನವರಿ 2024
ಮುಖ್ಯ ಪರೀಕ್ಷೆ: ಫೆಬ್ರವರಿ 2024
ಇದನ್ನೂ ಓದಿ : ಬಿಗ್ ಬಾಸ್ ಮನೆಯಲ್ಲಿ ಪೊಲೀಸರಿಂದ ಡ್ರೋನ್ ಪ್ರತಾಪ್ ( Drone Prathap ) ವಿಚಾರಣೆ
ಅರ್ಹತೆಗಳು
ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಮಾನ ಅರ್ಹತೆ. ಇಂಟಿಗ್ರೇಟೆಡ್ ಡ್ಯುಯಲ್ ಡಿಗ್ರಿ (IDD) ಪ್ರಮಾಣಪತ್ರವನ್ನು ಹೊಂದಿರುವ ಅಭ್ಯರ್ಥಿಗಳು IDD ಪಾಸ್ ಮಾಡುವ ದಿನಾಂಕವು ಡಿಸೆಂಬರ್ 31, 2023 ರಂದು ಅಥವಾ ಅದಕ್ಕಿಂತ ಮೊದಲು.
ಆಯ್ಕೆ ಪ್ರಕ್ರಿಯೆ
ಆಯ್ಕೆ ಪ್ರಕ್ರಿಯೆಯು ಆನ್ಲೈನ್ ಪರೀಕ್ಷೆ (ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ) ಮತ್ತು ನಿರ್ದಿಷ್ಟಪಡಿಸಿದ ಸ್ಥಳೀಯ ಭಾಷೆಯ ಪರೀಕ್ಷೆಯನ್ನು ಒಳಗೊಂಡಿರುತ್ತದೆ. 100 ಅಂಕಗಳಿಗೆ ಆಬ್ಜೆಕ್ಟಿವ್ ಪರೀಕ್ಷೆ ನಡೆಯಲಿದ್ದು, ಪೂರ್ವಭಾವಿ ಪರೀಕ್ಷೆಯನ್ನು ಆನ್ಲೈನ್ನಲ್ಲಿ ನಡೆಸಲಾಗುತ್ತದೆ. ಈ ಪರೀಕ್ಷೆಯು 1-ಗಂಟೆ ಅವಧಿಯದ್ದಾಗಿದ್ದು, 3 ವಿಭಾಗಗಳನ್ನು ಒಳಗೊಂಡಿರುತ್ತದೆ
ಅರ್ಜಿ ಶುಲ್ಕ
ಅರ್ಜಿ ಶುಲ್ಕ ₹750/- ಸಾಮಾನ್ಯ/ OBC/ EWS ವರ್ಗಕ್ಕೆ. SC/ ST/ PwBD/ ESM/DESM ಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
Discussion about this post