ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕು ಅನ್ನುವ ಕಾರಣದಿಂದ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ರಚಿಸಿತ್ತು. ಹೈಕಮಾಂಡ್ ಮಟ್ಟದಲ್ಲಿ ನಡೆದ ಮೈತ್ರಿಯಿಂದಾಗಿ ಸಮ್ಮಿಶ್ರ ಸರ್ಕಾರ ಟೇಕಾಫ್ ಆಗುವ ಮುನ್ನವೇ ಪತನಗೊಂಡಿತು.
ಸರ್ಕಾರ ಉರುಳುತ್ತಿದ್ದಂತೆ ಜೆಡಿಎಸ್ ಕಾಂಗ್ರೆಸ್ ಮೈತ್ರಿಯ ಕಥೆಯೇನು ಅನ್ನುವ ಪ್ರಶ್ನೆ ಉದ್ಭವಿಸಿತ್ತು. ಕಾಂಗ್ರೆಸ್ ನಾಯಕರು ದಳಪತಿಗಳ ಕಡೆಗೆ ಕೈ ತೋರಿಸಿದರೆ, ದಳಪತಿಗಳು ದೆಹಲಿ ಕಡೆಗೆ ಮುಖ ಮಾಡಿದ್ದರು.
ಕೊನೆಗೆ ಈ ಬಗ್ಗೆ ಸ್ಪಷ್ಟಪಡಿಸಿದ್ದ ಸಿದ್ದರಾಮಯ್ಯ ಮೈತ್ರಿ ನಿರ್ಧಾರ ಹೈಕಮಾಂಡ್ ಮಟ್ಟದಲ್ಲಿ ನಡೆದಿತ್ತು. ಇದನ್ನು ಮುಂದುವರಿಸುವುದು ಮುರಿದುಕೊಳ್ಳುವುದು ಅವರಿಗೆ ಬಿಟ್ಟ ವಿಚಾರ ಅಂದಿದ್ದರು.
ಈ ನಡುವೆ ಬೆಂಗಳೂರಿನಲ್ಲಿ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪಚುನಾವಣೆಗೆ ಎಲ್ಲ 15 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ನಾವು ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಎರಡು-ಮೂರು ದಿನಗಳಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದ್ದು, 15 ಕ್ಷೇತ್ರಗಳಲ್ಲಿಯೂ ಇಬ್ಬರು ಮೂವರು ಆಕಾಂಕ್ಷಿಗಳಿದ್ದಾರೆ. ಅವರಲ್ಲಿ ಒಬ್ಬರನ್ನು ಆಯ್ಕೆ ಮಾಡಬೇಕಿದೆ. ಏನೇ 15 ಕ್ಷೇತ್ರಗಳಲ್ಲೂ ಗೆಲುವು ನಮ್ಮದೇ ಅನ್ನುವ ವಿಶ್ವಾಸವನ್ನು ದಿನೇಶ್ ಗುಂಡೂರಾವ್ ವ್ಯಕ್ತಪಡಿಸಿದ್ದಾರೆ.
ಅಲ್ಲಿಗೆ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಕಥೆ ಖತಂ ಎಂದಾಯ್ತು.
ಆದರೆ ದುರಂತ ಅಂದರೆ, ಈ 15 ಕ್ಷೇತ್ರಗಳ ಪೈಕಿ ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಸ್ಪರ್ಧೆ ಏರ್ಪಡಲಿದೆ. ಇಷ್ಟು ದಿನಗಳ ದೋಸ್ತಿಯಾಗಿ ರಾಜ್ಯ ಉದ್ಧಾರ ಮಾಡ್ತೀವಿ ಅಂದವರು, ಉಪ ಚುನಾವಣೆಯಲ್ಲಿ ಪರಸ್ಪರ ಅದು ಹೇಗೆ ಹೊಡೆದಾಡಿಕೊಳ್ಳುತ್ತಾರೋ…
Discussion about this post