ಈಗಾಗಲೇ ಪಿಡಿಒಗಳ ( PDO Arrest) ಕಾರ್ಯವೈಖರಿ ಬಗ್ಗೆ ಅಸಮಾಧಾನದ ಮಾತುಗಳು ಕೇಳಿ ಬರುತ್ತಿದೆ. ಜೊತೆಗೆ ಈ ವ್ಯವಹಾರ ಬೇರೆ
ತುಮಕೂರು : ಎರಡು ತಲೆ ಹಾವು ಮಾರಾಟಕ್ಕೆ ಮುಂದಾಗಿದ್ದ ಪಿಡಿಒ ಕಾಂತರಾಜು ಸೇರಿ ಮೂವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.( PDO Arrest)
ಇದನ್ನು ಓದಿ : ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು
ಬಂಧಿತರನ್ನು ನಾಗರಘಟ್ಟ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕಾಂತರಾಜು, ಚಿಕ್ಕನಾಯಕನಹಳ್ಳಿ ತಾಲೂಕಿನ ಯಗಚೀಹಳ್ಳಿ ಗ್ರಾಮದ ಶೇಖ್ ಹುಸೇನ್ ಮತ್ತು ಮೊಹಮ್ಮದ್ ಆರೀಫ್ ಎಂದು ಗುರುತಿಸಲಾಗಿದೆ. ಇದೇ ವೇಳೆ ಕೃತ್ಯಕ್ಕೆ ಬಳಸಿದ ಬೈಕ್ ವಶಪಡಿಸಿಕೊಳ್ಳಲಾಗಿದೆ. (PDO Arrest)
ಆರೋಪಿಗಳು ಹಾವು ಮಾರಾಟಕ್ಕೆ ಮುಂದಾಗಿದ್ದಾರೆ ಅನ್ನುವ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿದ RFO ಜಗದೀಶ್ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದೆ.
Discussion about this post