ನವದೆಹಲಿ : ಕೊರೋನಾ ಸಂಕಷ್ಟ ಕಾಲದಲ್ಲಿ ಉದ್ಯೋಗದ ನಿರೀಕ್ಷೆಯಲ್ಲಿರುವ ಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರ ಶಿಕ್ಷಣ ಸಚಿವಾಲಯ ಗುಡ್ ನ್ಯೂಸ್ ಕೊಟ್ಟಿದೆ.ಕೇಂದ್ರಿಯ ವಿಶ್ವವಿದ್ಯಾನಿಲಯಗಳಲ್ಲಿ ಬೋಧಕ ಹಾಗೂ ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡುವಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸೂಚನೆ ಕೊಟ್ಟಿದ್ದಾರೆ.
ಕೇಂದ್ರಿಯ ವಿವಿಗಳಲ್ಲಿ 10 ಸಾವಿರಕ್ಕೂ ಹೆಚ್ಚು ಬೋಧಕ ಹಾಗೂ ಬೋಧಕೇತರ ಹುದ್ದೆಗಳು ಖಾಲಿ ಇದ್ದು, ಇವುಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಇನ್ನು ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ PhD ಕಡ್ಡಾಯವಲ್ಲ ಎಂದು ಸಚಿವರು ಹೇಳಿದ್ದು, ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ PhD ಕಡ್ಡಾಯ ಅನ್ನುವ ನಿಯಮವನ್ನು ತಾತ್ಕಾಲಿಕವಾಗಿ ತಡೆಯ ಹಿಡಿಯಲಾಗಿದೆ.
ಇನ್ನು ಕೊರೋನಾ ಕಾರಣದಿಂದ ವಿವಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ವಿವಿಗಳಿಗೆ ಅವಕಾಶ ನೀಡಲಾಗಿದ್ದು, ಸ್ನಾತಕೋತ್ತರ ಪದವಿ ಹಾಗೂ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆಯಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
Discussion about this post