ಬುಡಕಟ್ಟು ಪ್ರದೇಶಗಳಲ್ಲಿ ಜೀಪನೋಪಾಯದ ಅಂತರ ನಿವಾರಣೆ
ಬುಡಕಟ್ಟು ಸಮುದಾಯಗಳ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿ ಸುಧಾರಿಸಲು ಪ್ರಧಾನಮಂತ್ರಿ ಜನ್ಜಾತಿ ಉನ್ನತ್ ಗ್ರಾಮ್ ಅಭಿಯಾನ ದೇಶಾದ್ಯಂತ ನಡೆಯಲಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಹೇಳಿದ್ದಾರೆ.
ಈ ಯೋಜನೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಪರಿಶಿಷ್ಠ ಪಂಗಡದ ಜನಾಂಗದವರು ಹೆಚ್ಚಾಗಿರುವ ೩೧ ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಬುಡಕಟ್ಟು ಪ್ರದೇಶಗಳಲ್ಲಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಮೂಲಕ ಆರೋಗ್ಯ ಶಿಕ್ಷಣ ಮತ್ತು ಜೀಪನೋಪಾಯದ ಅಂತರ ನಿವಾರಿಸಿ ಜೀವನಮಟ್ಟ ಉತ್ತಮ ಪಡಿಸುವ ಗುರಿಹೊಂದಲಾಗಿದೆ.
ಇದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ೭೯ ಸಾವಿರದ ೧೫೬ ಕೋಟಿ ರೂಪಾಯಿ ನಿಗದಿಪಡಿಸಿದ್ದು, ಮುಂದಿನ ೫ ವರ್ಷಗಳಲ್ಲಿ ಪೂರ್ಣಗೊಳಿಸುವ ಉದ್ದೇಶ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.