ನವದೆಹಲಿ : ಎಂದಿನಂತೆ ಈ ಬಾರಿಯೂ ಪ್ರಧಾನಿ ನರೇಂದ್ರ ಮೋದಿಯವರು ಸೈನಿಕರೊಂದಿಗೆ ದೀಪಾವಳಿ ಆಚರಿಸಿಕೊಳ್ಳಲಿದ್ದಾರೆ. ರಜೌರಿಯ ನೌಶೇರಾದಲ್ಲಿರುವ LOCಯ ಫಾರ್ವರ್ಡ್ ಪೋಸ್ಟ್ಗಳಲ್ಲಿ ಬೆಳಕಿನ ಹಬ್ಬವನ್ನು ಸಂಭ್ರಮಿಸಲಿದ್ದಾರೆ.
ಕಳೆದ ಕೆಲವು ದಿನಗಳಿಂದ ರಜೌರಿ-ಪೂಂಚ್ ಗಡಿ ಪ್ರದೇಶದಲ್ಲಿ ಭಯೋತ್ಪಾದಕರ ವಿರುದ್ಧ ಸುದೀರ್ಘ ಕಾರ್ಯಾಚರಣೆ ನಡೆಯುತ್ತಿದೆ. ಹೀಗಾಗಿ ಪ್ರಧಾನಿ ಭೇಟಿ ಮಹತ್ವ ಪಡೆದುಕೊಂಡಿದ್ದು, ಪ್ರಧಾನಿ ಭೇಟಿ ಹಿನ್ನಲೆಯಲ್ಲಿ ಕಟ್ಟು ನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಬೆಳಗ್ಗೆ 11 ಗಂಟೆಗೆ ಪ್ರಧಾನಿ ಜಮ್ಮು ವಿಮಾನ ನಿಲ್ದಾಣಕ್ಕೆ ಬಂದಿದ್ದು ಅಲ್ಲಿಂದ ನೌಶೇರಾಗೆ ತೆರಳಿದ್ದಾರೆ. ಅಲ್ಲಿ ಸೈನಿಕರನ್ನು ಉದ್ದೇಶಿಸಿ ಮಾತನಾಡಿರುವ ಅವರು ಸೈನಿಕರ ಕೊಡುಗೆ ಹಾಗೂ ಸೈನಿಕರಿಗಾಗಿ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾತನಾಡಿದ್ದಾರೆ.
Prime Minister Narendra Modi arrived in Jammu’s Nowshera morning to celebrate Diwali with soldiers.
Discussion about this post