ಕಾರವಾರದಲ್ಲಿ ಪೋಷಣ್ ಅಭಿಯಾನ ಯೋಜನೆಯಡಿ ಪೋಷಣ್ ಮಾಸಾಚರಣೆ
ನೈಸರ್ಗಿಕವಾಗಿ ದೊರೆಯುವ ಆಹಾರ ಪದಾರ್ಥಗಳಿಂದ ತಯಾರಿಸುವ ಪೌಷ್ಠಿಕ ಆಹಾರಗಳು ಮತ್ತು ಜ್ಯೂಸ್ಗಳ ಮಾರಾಟ ಆರಂಭಿಸುವ ಮಹಿಳೆಯರಿಗೆ ಎಲ್ಲಾ ರೀತಿಯ ಸಹಕಾರ ಹಾಗೂ ಉತ್ತೇಜನ ನೀಡಲಾಗುವುದು ಎಂದು ಶಾಸಕ ಸತೀಶ್ ಸೈಲ್ ತಿಳಿಸಿದ್ದಾರೆ.
ಕಾರವಾರದಲ್ಲಿ ಪೋಷಣ್ ಅಭಿಯಾನ ಯೋಜನೆಯಡಿಯಲ್ಲಿ ನಡೆದ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗರ್ಭಿಣಿ ಮಹಿಳೆ ಮತ್ತು ಮಗುವಿನ ಪರಿಪೂರ್ಣ ಆರೋಗ್ಯಕ್ಕಾಗಿ ಪೌಷ್ಠಿಕ ಆಹಾರ ಸೇವನೆ ಅತ್ಯಗತ್ಯವಾಗಿದೆ ಎಂದು ತಿಳಿಸಿದರು.
ನೈಸರ್ಗಿಕವಾಗಿ ದೊರೆಯುವ ಆಹಾರ ಪದಾರ್ಥಗಳಿಂದ ಮನೆಗಳಲ್ಲಿಯೇ ಪೌಷ್ಠಿಕ ಆಹಾರ ಸಿದ್ದಪಡಿಸಬಹುದಾಗಿದೆ.
ಇಂತಹ ಆಹಾರ ಪದಾರ್ಥಗಳನ್ನು ಸಾರ್ವಜನಿಕರಿಗೆ ದೊರೆಯುವಂತೆ ಮಾಡಲು ಹಾಗೂ ಮಾರಾಟ ಮಾಡಲು ಬಯಸಿದ್ದಲ್ಲಿ ಅವರಿಗೆ ಸ್ಥಳಾವಕಾಶ ಸೇರಿದಂತೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಸ್ಪಷ್ಟಪಡಿಸಿದರು.