ಬೆಂಗಳೂರು : ವಯಸ್ಸಿನ ಒಂದೇ ಕಾರಣಕ್ಕಾಗಿ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವುದು ಖಚಿತವಾಗಿದೆ. ಪಕ್ಷ ಸಂಘಟನೆಯಲ್ಲಿ ಸಾಕಷ್ಟು ಕೆಲಸ ಮಾಡಿರುವ ಯಡಿಯೂರಪ್ಪ ಅವರನ್ನು ಗೌರವಯುತವಾಗಿ ಕಳುಹಿಸಿಕೊಡಲು ಬಿಜೆಪಿ ವರಿಷ್ಠರು ನಿರ್ಧರಿಸಿದ್ದಾರೆ. ಆದರೆ ಈ ಹಿಂದಿನಂತೆ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಅನ್ನುವುದನ್ನು ಹೈಕಮಾಂಡ್ ನಿರ್ಧರಿಸಲಿದೆ.
ಈಗಿರುವ ಮಾಹಿತಿಗಳ ಪ್ರಕಾರ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋದಲ್ಲಿ ಇರುವಂತೆ ದೆಹಲಿಯಿಂದಲೇ ಸಿಎಂ ಅಭ್ಯರ್ಥಿ ಆಗಮಿಸಲಿದ್ದಾರೆ. ಹೌದು ಕೇಂದ್ರ ಸಚಿವರಾಗಿರುವ ಪ್ರಹ್ಲಾದ್ ಜೋಷಿಯವರನ್ನು ಸಿಎಂ ಸ್ಥಾನದಲ್ಲಿ ಕೂರಿಸಲು ಹೈಕಮಾಂಡ್ ಮನಸ್ಸು ಮಾಡಿದೆ ಎನ್ನಲಾಗಿದೆ. ಹಾಗೇ ನೋಡಿದರೆ ಈ ಹಿಂದೆ ಬೆಳಗಾವಿ ಭಾಗದ ಸುರೇಶ್ ಅಂಗಡಿ ಸಿಎಂ ಆಗ್ತಾರೆ ಎಂದು ಹೇಳಲಾಗಿತ್ತು. ಕೊರೋನಾ ಸೋಂಕಿಗೆ ಅವರು ಬಲಿಯಾದ ಕಾರಣ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆ ಸ್ಥಗಿತಗೊಂಡಿತ್ತು.

ಇದೀಗ ಬೆಳಗಾವಿ ಭಾಗದವರೇ ಆಗಿರುವ ಜೋಶಿ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಲಿದ್ದಾರೆ ಎನ್ನಲಾಗಿದೆ. ಹಾಗಂತ ಇವರೇ ಮುಖ್ಯಮಂತ್ರಿಯಾಗುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ಹೈಕಮಾಂಡ್ ನಾಲ್ಕೈದು ಹೆಸರುಗಳನ್ನು ಅಂತಿಮಗೊಳಿಸಿದ್ದು, ಯಡಿಯೂರಪ್ಪ ರಾಜೀನಾಮೆಯ ಬಳಿಕ ರಾಜ್ಯದ ರಾಜಕೀಯ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ಹೆಸರನ್ನು ಬಿಡುವ ಸಾಧ್ಯತೆಗಳಿದೆ. ಆ ಪೈಕಿ ಜೋಶಿ ಹೆಸರು ಮುಂಚೂಣಿಯಲ್ಲಿದೆ. ಕಾರಣ ಅವರ ಜಾತಿ.

Discussion about this post