ಹೈದರಬಾದ್ : ಇಲ್ಲಿನ ಬಂಜಾರ ಹಿಲ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿದ್ದ ಫ್ಯಾಷನ್ ಡಿಸೈನರ್ ಪ್ರತ್ಯೂಷಾ ಗರಿಮೆಲ್ಲಾ ಇಂದು ಮಧ್ಯಾಹ್ನ ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಶನಿವಾರ ಮಧ್ಯಾಹ್ನ, ಅವರು ವಾಸವಿದ್ದ ನಿವಾಸದ ಸಿಬ್ಬಂದಿ ಭದ್ರತಾ ತಪಾಸಣೆ ಮಾಡುತ್ತಿದ್ದ ವೇಳೆ ಇವರ ಮನೆಯಿಂದ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಹೀಗಾಗಿ ಅನುಮಾನಗೊಂಡ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಬಳಿಕ ಮನೆಯ ಬಾಗಿಲು ಒಡೆದು ಪೊಲೀಸರು ಒಳ ಪ್ರವೇಶಿಸಿದ ವೇಳೆ ಬಾತ್ ರೂಮ್ ನಲ್ಲಿ ಪ್ರತ್ಯೂಷಾ ಶವ ಪತ್ತೆಯಾಗಿದೆ. ಇದೇ ವೇಳೆ ಬಾತ್ ರೂಮ್ ನಿಂದ ಅನೇಕ ರಾಸಾಯನಿಕಗಳ ಬಾಟಲಿಯನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಉಸ್ಮಾನಿಯಾ ಜನರಲ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಅನುಮಾನಾಸ್ಪದ ಸಾವು ಎಂಬ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ, ದೆಹಲಿಯಲ್ಲಿರುವ ಸಂಬಂಧಿಕರು ಬಂದ ಬಳಿಕ ಮುಂದಿನ ಕಾರ್ಯ ನಡೆಯಲಿದೆ.
ಪ್ರತ್ಯುಷಾ ಗರಿಮೆಲ್ಲಾ ಎಂಬ ಬ್ರಾಂಡ್ ನಲ್ಲಿ ತಮ್ಮ ಉತ್ಪನ್ನಗಳನ್ನು ಅವರು ಮಾರಾಟ ಮಾಡುತ್ತಿದ್ದರು.
Prathyusha Garimella used to run a fashion studio in Hyderabad’s Banjara Hills and had top clients from Tollywood, Bollywood and also from other sectors.
Discussion about this post