praveen nettar case : ಆರೋಪಿಗಳು ಯಾರೆಂದು ಗೊತ್ತಾಗಿದೆ. ಅವರ ಜಾತಕ ಪೊಲೀಸರ ಬಳಿ ಇದೆ
ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ( praveen nettar case) ಪ್ರಕರಣದಲ್ಲಿ ನೇರವಾಗಿ ಭಾಗಿಯಾದವರು ಯಾರೆಂದು ಗೊತ್ತಾಗಿದೆ. ಅವರ ಖಚಿತ ಗುರುತು ಕೂಡಾ ಸಿಕ್ಕಿದೆ. ಆದರೆ ಅವರು ಬಚ್ಚಿಟ್ಟುಕೊಂಡಿದ್ದಾರೆ. ಶೀಘ್ರದಲ್ಲೇ ಅವರನ್ನು ಬಂಧಿಸುತ್ತೇವೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರನ್ನು ಬಂಧಿಸಲಾಗಿದೆ. ಮೂರು ಆರೋಪಿಗಳ ಫೋಟೋ, ಮನೆ ವಿಳಾಸ, ಮನೆಯವರ ಮಾಹಿತಿಯೂ ಪೊಲೀಸರ ಬಳಿ ಇದೆ. ಹೀಗಾಗಿ ತಲೆ ಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆ ಹಚ್ಚಲು ಕೋರ್ಟ್ ವಾರೆಂಟ್ ಪಡೆದು ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಲು ಕ್ರಮ ಕೈಗೊಳ್ಳಲಾಗುವುದು ಎಂದು ಅಲೋಕ್ ಹೇಳಿದ್ದಾರೆ.
ಇದನ್ನು ಓದಿ : lovers suicide : ಪ್ರೀತಿಗೆ ಮನೆಯವರ ವಿರೋಧ : ಆತ್ಮಹತ್ಯೆಯಲ್ಲಿ ಅಂತ್ಯವಾದ ಲವ್ ಸ್ಟೋರಿ
ಪೊಲೀಸರಿಂದ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ಆರೋಪಿಗಳು ಪದೇ ಪದೇ ಜಾಗ ಬದಲಾಯಿಸುತ್ತಿದ್ದಾರೆ. ಆರೋಪಿಗಳು ತಲೆ ಮರೆಸಿಕೊಳ್ಳಲು ಕೆಲವರು ಸಹಾಯ ಮಾಡುತ್ತಿದ್ದಾರೆ. ಹೀಗಾಗಿ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಹಕರಿಸಿದವರನ್ನು ಬಂಧಿಸುತ್ತೇವೆ.
ಎನ್ಐಎ ಹಾಗೂ ರಾಜ್ಯ ಪೊಲೀಸರು ಜಂಟಿಯಾಗಿ ತನಿಖೆ ಮುಂದುವರಿಸಿದ್ದೇವೆ. ಬಂಧಿತ ಆರೋಪಿಗಳಿಗೆ PFI ನಂಟಿರುವ ಬಗ್ಗೆ ಶಂಕೆ ಇದೆ. ಆರೋಪ ಪಟ್ಟಿಯಲ್ಲಿ ಈ ಬಗ್ಗೆ ಎಲ್ಲಾ ದಾಖಲೆಗಳನ್ನು ಸಲ್ಲಿಸಲಾಗುತ್ತದೆ ಎಂದು ಅಲೋಕ್ ಕುಮಾರ್ ಹೇಳಿದರು.
ಈ ನಡುವೆ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ದಕ ಜಿಲ್ಲಾ ಪೊಲೀಸ್, ಮಂಗಳೂರು ಪೊಲೀಸ್, ಹಾಸ, ಮಂಡ್ಯ ಹೀಗೆ ಎಂಟು ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಸಭೆಯನ್ನು ಎಡಿಜಿಪಿ ಕರೆದಿದ್ದಾರೆ. ಈ ಸಭೆಯಲ್ಲಿ ಎನ್ಐಎ ಅಧಿಕಾರಿಗಳು ಪಾಲ್ಗೊಳ್ಳುವ ಸಾಧ್ಯತೆ ಇದೆ. ಈ ಸಭೆ ಸಾಕಷ್ಟು ಮಹತ್ವ ಪಡೆದುಕೊಂಡಿದ್ದು, ಮಹತ್ವದ ಕಾರ್ಯಾಚರಣೆ ಮುನ್ಸೂಚನೆ ನೀಡಿದೆ.
Discussion about this post